News Kannada
Friday, September 30 2022

ಕರ್ನಾಟಕ

ಮಡಿಕೇರಿಯಲ್ಲಿ ರಂಗಭೂಮಿ ತರಬೇತಿ ಶಿಬಿರಕ್ಕೆ ನಟ ಮಂಡ್ಯ ರಮೇಶ್ ಚಾಲನೆ - 1 min read

Photo Credit :

ಮಡಿಕೇರಿಯಲ್ಲಿ ರಂಗಭೂಮಿ ತರಬೇತಿ ಶಿಬಿರಕ್ಕೆ ನಟ ಮಂಡ್ಯ ರಮೇಶ್ ಚಾಲನೆ

ಮಡಿಕೇರಿ: ವಿದ್ಯಾರ್ಥಿ ಜೀವನದಿಂದಲೇ ಮಕ್ಕಳಿಗೆ ರಂಗಭೂಮಿ ಕಲೆಯ ಬಗ್ಗೆ ಆಸಕ್ತಿ ಮೂಡಿಸುವ ಅಗತ್ಯವಿದ್ದು, ಶಾಲಾ ಕಾಲೇಜುಗಳಲ್ಲಿ ರಂಗಭೂಮಿ ಶಿಕ್ಷಣವನ್ನು ಆರಂಭಿಸಬೇಕೆಂದು ಚಲನಚಿತ್ರ ನಟ ಮಂಡ್ಯ ರಮೇಶ್ ಅಭಿಪ್ರಾಯಪಟ್ಟಿದ್ದಾರೆ.

ನಗರದ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದಲ್ಲಿ ರಂಗಭೂಮಿ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರಂಗಭೂಮಿ ಸೇರುವವರು ಆತ್ಮಸ್ಥೈರ್ಯ, ಆಸಕ್ತಿ, ಶಿಸ್ತು, ಅರ್ಪಣಾ ಮನೋಭಾವ ಬೆಳೆಸಿಕೊಳ್ಳುವುದು ಸೂಕ್ತವೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪ್ರತಿಯೊಂದು ಮಕ್ಕಳಲ್ಲಿ ತನ್ನದೇ ಆದ ಪ್ರತಿಭೆ ಅಡಗಿರುತ್ತದೆ. ಆದರೆ ಅದನ್ನು ಹೊರಹಾಕಲು ವೇದಿಕೆ ಲಭಿಸಿರುವುದಿಲ್ಲ ಅಷ್ಟೆ. ವಿದ್ಯಾರ್ಥಿಗಳು ಪ್ರತಿಭೆಯನ್ನು ತೋರ್ಪಡಿಸಲು ಇದೊಂದು ಉತ್ತಮವಾದ ವೇದಿಕೆಯಾಗಿದ್ದು, ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳುವಂತಾಗಬೇಕು ಎಂದರು.

ಶಾಲಾ ವಾರ್ಷಿಕೋತ್ಸವಕ್ಕೆ ಎಚ್.ದುಂಡಿರಾಜ್ ರಚಿಸಿರುವ ‘ಅಜ್ಜಿಕಥೆ’ ಎಂಬ ನಾಟಕಕ್ಕೆ ತಯಾರಿ ಮಾಡಲಾಗುತ್ತಿದೆ. ಇಂದಿನಿಂದ ಜ.6 ರವರೆಗೆ ಶಿಬಿರ ಹಮ್ಮಿಕೊಂಡಿದ್ದು, ಸಂಪನ್ಮೂಲ ವ್ಯಕ್ತಿಗಳಿಂದ ನೃತ್ಯ, ರಂಗಗೀತೆಗಳು ಸೇರಿದಂತೆ ರಂಗಭೂಮಿಗೆ ಸಂಬಂಧಿಸಿದ ಎಲ್ಲಾ ಕಲೆಯನ್ನು ಹೇಳಿಕೊಡಲಾಗುತ್ತಿದೆ ಎಂದು ರಮೇಶ್ ತಿಳಿಸಿದರು.

ಕಾರ್ಯಕ್ರಮದಲ್ಲಿ ರಂಗಭೂಮಿ ಶಿಕ್ಷಕರಾದ ಶ್ರೀರಾಮು, ಚೇತನ್, ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ ಪ್ರಾಂಶುಪಾಲ ಸೀನಿವಾಸನ್, ಆಡಳಿತ ಮಂಡಳಿ ಕಾರ್ಯದರ್ಶಿ ಬಾಲಾಜಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

See also  ಬೇಲೂರಲ್ಲಿ ಶ್ರೀಗಂಧ ಕಳ್ಳನ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು