News Kannada
Thursday, October 06 2022

ಕರ್ನಾಟಕ

ಅಂಬೇಡ್ಕರ್ ಅವಮಾನ: ಆರೋಪಿಯ ಗಡಿಪಾರಿಗೆ ಕಾಂಗ್ರೆಸ್ ಎಸ್ಸಿ ಘಟಕ ಆಗ್ರಹ - 1 min read

Photo Credit :

ಅಂಬೇಡ್ಕರ್ ಅವಮಾನ: ಆರೋಪಿಯ ಗಡಿಪಾರಿಗೆ ಕಾಂಗ್ರೆಸ್ ಎಸ್ಸಿ ಘಟಕ ಆಗ್ರಹ

ಮಡಿಕೇರಿ: ಸಾಮಾಜಿಕ ಜಾಲತಾಣದಲ್ಲಿ ಭಾರತದ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಬಗ್ಗೆ ಕೀಳಾಗಿ ಸಂದೇಶಗಳನ್ನು ಕಳುಹಿಸಿದ ವ್ಯಕ್ತಿಯನ್ನು ತಕ್ಷಣ ಬಂಧಿಸಿ, ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ವಿ.ಕೆ.ಸತೀಶ್ ಕುಮಾರ್ ಅವರು, ‘ಏಕಾಂಗಿ ಹುಡುಗರು’ ಎಂಬ ಹೆಸರಿನಲ್ಲಿ ‘ವಾಟ್ಸ್ಆಪ್’ ನಲ್ಲಿ ಗ್ರೂಪ್ ರಚಿಸಿ ಅದರಲ್ಲಿ ಭಾರತದ ಸಂವಿಧಾನ ಹಾಗೂ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಬಗ್ಗೆ ಕೀಳು ಅಭಿರುಚಿಯ ಸಂದೇಶಗಳನ್ನು ರವಾನಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ದಲಿತ ಸಂಘಟನೆಗಳು ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿ, ಆರೋಪಿಯ ವಿರುದ್ಧ ದೂರು ಸಲ್ಲಿಸಿದ್ದರೂ, ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರಕಾರವಿದ್ದರೂ, ಅಂಬೇಡ್ಕರ್ ಹಾಗೂ ಸಂವಿಧಾನದ ಬಗ್ಗೆ ಕೇವಲವಾಗಿ ಸಂದೇಶ ಕಳುಹಿಸಿದ ವ್ಯಕ್ತಿಯನ್ನು ಪೊಲೀಸರು ಇನ್ನೂ ಬಂಧಿಸದಿರುವುದು ವಿಷಾದನೀಯ. ಪೊಲೀಸ್ ಇಲಾಖೆ ನಿದ್ರಾವಸ್ಥೆಯಲ್ಲಿದೆ ಎಂದು ಆರೋಪಿಸಿದ ಸತೀಶ್ ಕುಮಾರ್ ಪೊಲೀಸರ ನಿರ್ಲಕ್ಷ್ಯವನ್ನು ಖಂಡಿಸಿ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ದಲಿತ ಸಂಘಟನೆಗಳ ಹೋರಾಟಕ್ಕೆ ಕಾಂಗ್ರೆಸ್ ನ ಪರಿಶಿಷ್ಟ ಜಾತಿ ಘಟಕ ಸಂಪೂರ್ಣ ಬೆಂಬಲ ನೀಡಲಿದೆ ಎಂದರು.

ಪೊಲೀಸರು ತಕ್ಷಣ ಎಚ್ಚೆತ್ತುಕೊಂಡು ಆರೋಪಿಯನ್ನು ಬಂಧಿಸಬೇಕು ಮತ್ತು ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ಸತೀಶ್ ಕುಮಾರ್ ಒತ್ತಾಯಿಸಿದರು.

ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಸೋಮವಾರಪೇಟೆ ತಾಲೂಕು ಅಧ್ಯಕ್ಷರಾದ ಸುರೇಶ್, ಘಟಕದ ಜಿಲ್ಲಾ ಕಾರ್ಯದರ್ಶಿ ಗಾಯತ್ರಿ ನರಸಿಂಹ, ಸದಸ್ಯರಾದ ವಿಶ್ವನಾಥ್ ಹಾಗೂ ಡಿಸಿಸಿ ಸದಸ್ಯರಾದ ಪುಟ್ಟಲಕ್ಷ್ಮಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

See also  ಲೈನ್ಮನ್ ಸಾವು: ಪೊಲೀಸರ ಮೇಲೆ ಕಲ್ಲು ತೂರಾಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು