News Kannada
Saturday, October 01 2022

ಕರ್ನಾಟಕ

ಸಮುದ್ರದಾಳದ ವಿಷ್ಮಯ ಲೋಕವನ್ನು ತೆರೆದಿಡಲು ಭಟ್ಕಳದಲ್ಲಿ ಸ್ಕೂಬಾ ಡೈವಿಂಗ್ ಉತ್ಸವ - 1 min read

Photo Credit :

ಸಮುದ್ರದಾಳದ ವಿಷ್ಮಯ ಲೋಕವನ್ನು ತೆರೆದಿಡಲು ಭಟ್ಕಳದಲ್ಲಿ ಸ್ಕೂಬಾ ಡೈವಿಂಗ್ ಉತ್ಸವ

ಕಾರವಾರ: ಭಟ್ಕಳ ತಾಲೂಕಿನ ಮುರುಡೇಶ್ವರದ ನೇತ್ರಾಣಿ ದ್ವೀಪದಲ್ಲಿ ಜನವರಿ ೬ ಮತ್ತು ೭ರಂದು ಅಂತರರಾಷ್ಟ್ರೀಯ ಸ್ಕೂಬಾ ಡೈವಿಂಗ್ ಉತ್ಸವವನ್ನು ಜಿಲ್ಲಾಡಳಿತ ಮೊದಲ ಬಾರಿಗೆ ಆಯೋಜಿಸಲಾಗಿದ್ದು ಸಮುದ್ರದಾಳದ ವಿಷ್ಮಯ ಲೋಕವನ್ನು ವಿಕ್ಷಣೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ.

ನೀಲಿ ಸಮುದ್ರದಿಂದ ಸುತ್ತುವರೆದಿರುವ ನೇತ್ರಾಣಿ ದ್ವೀಪ ತನ್ನ ಒಡಲಲ್ಲಿ ಅದ್ಭುತ ಜಗತ್ತನ್ನೇ ಇರಿಸಿಕೊಂಡಿದೆ. ಸ್ಪಷ್ಟವಾಗಿ ಕಾಣುವ ನೀರಿನಾಳದಲ್ಲಿನ ಹವಳ ದಿಬ್ಬಗಳು, ಅಪರೂಪದ ಜೀವವೈವಿಧ್ಯ ‘ಸ್ಕೂಬಾ ಡೈವಿಂಗ್’ ಚಟುವಟಿಕೆಗೆ ಪ್ರಶಸ್ತ ತಾಣವಾಗಿದೆ. ಇಲ್ಲಿ ಚಿಟ್ಟೆ ಮೀನು, ಕ್ಯಾಟ್ ಫಿಶ್, ಟೈಗರ್ ಫಿಶ್, ಬಂದೂಕು ಮೀನು, ಗಿಳಿ ಮೀನು, ಹಾವು ಮೀನು, ಸ್ಟಿಂಗ್ ರೇ, ಕಡಲಾಮೆ ಸೇರಿದಂತೆ ೩೫ಕ್ಕೂ ಅಧಿಕ ಪ್ರಭೇದದ ಜಲಚರಗಳು ಕಾಣಸಿಗಲಿದ್ದು, ಇಂಥ ಅಪರೂಪದ ಜೀವರಾಶಿಗಳು ಇಲ್ಲಿನ ಹವಳದಿಬ್ಬಗಳನ್ನೇ ಆಶ್ರಯಿಸಿದೆ.

20 ಲಕ್ಷ ಬಿಡುಗಡೆ: ಉತ್ಸವಕ್ಕೆ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ವತಿಯಿಂದ ೨೦ ಲಕ್ಷ ಬಿಡುಗಡೆಯಾಗಿದ್ದು, ಉತ್ಸವದ ಸಂಪೂರ್ಣ ಜವಾಬ್ದಾರಿಯನ್ನು ಪುಣೆಯ ಫಿನ್ಕಿಕ್ ಅಡ್ವೆಂಚರ್ಸ್ ಸಂಸ್ಥೆ ವಹಿಸಿಕೊಂಡಿದೆ. ಉತ್ಸವದ ಯಶಸ್ವಿಗೆ ಈಗಿನಿಂದಲೇ ತಯಾರಿ ಆರಂಭವಾಗಿದೆ.

ಸ್ಕೂಬಾ ಡೈವಿಂಗ್ ಉತ್ಸವಕ್ಕೆ ಜಗತ್ತಿನ ನಾನಾ ಕಡೆಗಳಿಂದ ಒಟ್ಟು 150 ಮಂದಿ ಭಾಗವಹಿಸುತ್ತಿದ್ದಾರೆ. ಅಳ ಸಮುದ್ರದೊಳಗೆ ಇಳಿದು ಹವಳ ದಿಬ್ಬ ಹಾಗೂ ಜಲಚರಗಳನ್ನು ಕಣ್ತುಂಬಿಕೊಳ್ಳುವ ಜತೆಗೆ ಉತ್ಸವಕ್ಕೆ ಪೂರಕವಾದ ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸ್ಥಳೀಯ ಸಮುದಾಯ, ಮೀನುಗಾರರು, ಆಳ ಸಮುದ್ರ, ಕಡಲತೀರ ಕುರಿತು ಕಿರು ಚಿತ್ರ ಪ್ರದರ್ಶನ, ಛಾಯಾಚಿತ್ರ ಪ್ರದರ್ಶನ, ಸ್ನೋರ್ಕಲಿಂಗ್ ಹಾಗೂ ಜಲ ಕ್ರೀಡೆಗಳು ಇರಲಿದೆ. ಉತ್ಸವದಲ್ಲಿ ಭಾಗವಹಿಸುವವರಿಗೆ ಆಕರ್ಷಕ ಹಾಗೂ ರಿಯಾಯಿತಿ ದರದಲ್ಲಿ ಪ್ರವೇಶ ಅವಕಾಶ ಕಲ್ಪಿಸುತ್ತಿದ್ದೇವೆ.

ನೇತ್ರಾಣಿ ಪ್ರಶಸ್ತ ಸ್ಥಳ: ಅಂಡಮಾನ್- ನಿಕೋಬಾರ್, ಲಕ್ಷದ್ವೀಪ, ಪಾಂಡಿಚೇರಿ ಹಾಗೂ ಗೋವಾ ಹೊರತುಪಡಿಸಿದರೆ ಸ್ಕೂಬಾ ಡೈವಿಂಗ್ ಹೇಳಿ ಮಾಡಿಸಿದ ಜಾಗವಿರುವುದು ನೇತ್ರಾಣಿಯಲ್ಲಿ ಮಾತ್ರ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ದಿಸೆಯಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತಸ್ಕೂಬಾ ಡೈವಿಂಗ್ ಚಟುವಟಿಕೆ ನಡೆಸಲು ಡೈವ್ ಗೋವಾ, ಮುಂಬೈನ ವೆಸ್ಟ್ ಕೋಸ್ಟ್ ಮತ್ತು ಮುರ್ಡೇಶ್ವರದ ನೇತ್ರಾಣಿ ಅಡ್ವೆಂಚರ್ ಸಂಸ್ಥೆಗೆ ಅನುಮತಿ ನೀಡಿದೆ.

 

See also  ಕೋವಿಡ್ ಮೂರನೇ ಅಲೆಯನ್ನು ತಡೆಯಲು ಸರ್ವ ರೀತಿಯಲ್ಲೂ ಸರ್ಕಾರ ಸನ್ನದ್ದ ; ಡಾ ಅಶ್ವಥ ನಾರಾಯಣ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು