News Kannada
Friday, September 30 2022

ಕರ್ನಾಟಕ

ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ - 1 min read

Photo Credit :

ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

ಮಡಿಕೇರಿ: ಮಡಿಕೇರಿ ತಾಲ್ಲೂಕಿನ ಗಡಿಭಾಗದಲ್ಲಿರುವ ಚೆಂಬು ಪಂಚಾಯ್ತಿಯ ದಬ್ಬಡ್ಕ ಗ್ರಾಮಕ್ಕೆ ಯೋಗ್ಯ ರಸ್ತೆ ನಿರ್ಮಿಸಬೇಕೆಂದು ನೀಡಿದ್ದ ಗಡುವು ಮೀರಿದ್ದರು ಸಂಬಂಧಪಟ್ಟ ಅಧಿಕಾರಿಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಶ್ರೀರಾಮ ಯುವಕ ಸಂಘದ ಅಧ್ಯಕ್ಷ ಜಗನ್, ಖಜಾಂಚಿ ಬೊಳ್ತಜೆ ಪ್ರಜ್ವಲ್ ಅವರ ನೇತೃತ್ವದಲ್ಲಿ ಬೆಳಗ್ಗೆ ಗಾಂಧಿ ಮಂಟಪದ ಎದುರು ಸಮಾವೇಶಗೊಂಡ ಗ್ರಾಮಸ್ಥರು ಘೋಷಣೆಗಗಳೊಂದಿಗೆ ಜಿಲ್ಲಾಡಳಿತ ಭವನದ ಬಳಿ ತೆರಳಿ ರಸ್ತೆ ದುರಸ್ತಿಗಾಗಿ ಆಗ್ರಹಿಸಿದರು.

ಈ ಸಂದರ್ಭ ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಶ್ರೀ ವಿದ್ಯಾ ಅವರಿಗೆ ಮನವಿ ಸಲ್ಲಿಸಿದ ಸಂಘದ ಪದಾಧಿಕಾರಿಗಳು ದಬ್ಬಡ್ಕ ಜನರ ಪ್ರಮುಖ ಅಹವಾಲಾಗಿರುವ ರಸ್ತೆ ಕಾಮಗಾರಿಗೆ ಸ್ಪಂದಿಸುವಂತೆ ತಿಳಿಸಿದರು. ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳದಿದ್ದಲ್ಲಿ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ದಬ್ಬಡ್ಕ ಗ್ರಾಮಸ್ಥರು ಪಾಲ್ಗೊಳ್ಳುವುದಿಲ್ಲವೆಂದು ಸ್ಪಷ್ಟಪಡಿಸಿದರು.

ಸ್ಥಳಕ್ಕೆ ಇಂಜಿನಿಯರ್ ಭೇಟಿ
ಗ್ರಾಮೀಣ ಜನರ ಸಂಕಷ್ಟಗಳನ್ನು ಆಲಿಸಿದ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರು, ತಕ್ಷಣ ಗ್ರಾಮಸ್ಥರೊಂದಿಗೆ ಇಂಜಿನಿಯರ್ ಒಬ್ಬರನ್ನು ಗ್ರಾಮಕ್ಕೆ ಕಳುಹಿಸಿಕೊಡುವ ಭರವಸೆ ನೀಡಿದರು. ರಸ್ತೆ ಕಾಮಗಾರಿಗೆ ಕ್ರಿಯಾಯೋಜನೆ ರೂಪಿಸಲು ಕ್ರಮ ಕೈಗೊಂಡರು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆಯಿಂದ ಹಿಂದಕ್ಕೆ ಸರಿದು, ಇಂಜಿನಿಯರೊಂದಿಗೆ ಗ್ರಾಮಕ್ಕೆ ತೆರಳಿದರು.

ಈ ಬಗ್ಗೆ ಸಂಘದ ಪ್ರಮುಖರಾದ ಪ್ರಜ್ವಲ್ ಮಾತನಾಡಿ, ದಬ್ಬಡ್ಕ ಗ್ರಾಮಕ್ಕೆ ರಸ್ತೆ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿಗಳು ಇಂಜಿನಿಯರ್ ಅವರನ್ನು ತಮ್ಮೊಂದಿಗೆ ಕಳುಹಿಸಿಕೊಟ್ಟಿದ್ದಾರೆ. ಈ ಎಲ್ಲಾ ಪ್ರಕ್ರಿಯೆಗಳ ಬಳಿಕವು ರಸ್ತೆ ಕಾಮಗಾರಿ ನಡೆಯದಿದ್ದಲ್ಲಿ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಸಂಘದ ಕಾರ್ಯದರ್ಶಿ ಅಜಿತ್, ಯತೀಶ್ ಕೆದಂಬಾಡಿ, ಗಿರೀಶ್ ಹೊಸೂರು ಸೇರಿದಂತೆ ಗ್ರಾಮಸ್ಥರು ಹಲ ಪಾಲ್ಗೊಂಡಿದ್ದರು.

See also  ಕೇಂದ್ರ ಬಜೆಟ್ ನಲ್ಲಿ ಕಾಫಿ, ಕೃಷಿ ಸಮಸ್ಯೆಗೆ ಪರಿಹಾರ ನೀಡಿಕೆಗೆ ಕೋರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು