News Kannada
Wednesday, September 28 2022

ಕರ್ನಾಟಕ

ಬಿಜೆಪಿಯದ್ದು ರಾಕ್ಷಸ ರೂಪದ ಹಿಂದುತ್ವ: ಸಿಎಂ ಸಿದ್ದರಾಮಯ್ಯ - 1 min read

Photo Credit :

ಬಿಜೆಪಿಯದ್ದು ರಾಕ್ಷಸ ರೂಪದ ಹಿಂದುತ್ವ: ಸಿಎಂ ಸಿದ್ದರಾಮಯ್ಯ

ಮಡಿಕೇರಿ: ಕಾಂಗ್ರೆಸ್ ಪಕ್ಷ ಮನುಷ್ಯತ್ವ ಇರುವ ಹಿಂದುತ್ವವನ್ನು ಪರಿಪಾಲನೆ ಮಾಡುತ್ತಿದ್ದು, ಬಿಜೆಪಿ ಮನುಷ್ಯತ್ವ ಇಲ್ಲದ ಮೃಗೀಯ ಮತ್ತು ರಾಕ್ಷಸ ರೂಪದ ಹಿಂದುತ್ವವನ್ನು ಅನುಸರಿಸುತ್ತಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಂದೂ ಧರ್ಮದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲವೆಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಡಿಕೇರಿಯ ಜನರಲ್ ತಿಮ್ಮಯ ಕ್ರೀಡಾಂಗಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಮುಖಂಡರುಗಳ ವಿರುದ್ಧ ವಾಗ್ದಾಳಿ ನಡೆಸಿದರು. ಹಿಂದುತ್ವ ಯಾರ ಅಪ್ಪನ ಮನೆಯ ಆಸ್ತಿಯೂ ಅಲ್ಲ. ಕಾಂಗ್ರೆಸ್ ಎಲ್ಲಾ ಧರ್ಮ, ಜಾತಿಯನ್ನು ಪ್ರೀತಿಸುತ್ತದೆ, ಸಮಾನ ಗೌರವ ಮತ್ತು ಅವಕಾಶವನ್ನು ನೀಡುತ್ತದೆ. ಸಂವಿಧಾನವನ್ನು ಪ್ರತಿಪಾದನೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷ ಮನುಷ್ಯತ್ವ ಇರುವ ಹಿಂದುತ್ವಕ್ಕೆ ಗೌರವ ನೀಡುತ್ತದೆ ಎಂದು ತಿಳಿಸಿದರು.

ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಡೋಂಗಿ ಹೇಳುವ ಬಿಜೆಪಿಯಲ್ಲಿ ಮುಸಲ್ಮಾನರು, ಕ್ರೈಸ್ತರು, ದಲಿತರು ಎಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ಪಕ್ಷದಲಿರುವ ಅನೇಕರು ಹಿಂದುಗಳೇ ಆಗಿದ್ದಾರೆ. ಆದರೆ ನಾವು ಮನುಷ್ಯತ್ವದ ಹಿಂದುತ್ವವನ್ನು ಪಾಲಿಸುತ್ತೇವೆ. ಬಿಜೆಪಿ ಮಂದಿ ರಣಹದ್ದುಗಳಿದ್ದಂತೆ. ಹೆಣದ ಮೇಲೆ ರಾಜಕಾರಣ ಮಾಡುವವರು ಎಂದು ಟೀಕಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟ ಸರ್ಕಾರವೆಂದು ಹೇಳಿ ಜೈಲಿಗೆ ಹೋಗಿ ಬಂದ ಯಡಿಯೂರಪ್ಪ ಅವರನ್ನು ಪಕ್ಕದಲ್ಲಿ ಕೂಡಿಸಿಕೊಂಡು ಆರೋಪ ಮಾಡುತ್ತಾರೆ. ನೇರವಾಗಿ ಚೆಕ್ ಮೂಲಕ ಲಂಚ ತೆಗೆದುಕೊಂಡು ಜೈಲಿಗೆ ಹೋದವರು ಯಡಿಯೂರಪ್ಪ ಅವರಾಗಿದ್ದಾರೆ. ಇಂತಹ ಪುಂಗಿ ದಾಸರು ಮತ್ತೆ ಅಧಿಕಾರಕ್ಕೆ ಬರಬೇಕೆ ಎಂದು ಪ್ರಶ್ನಿಸಿದ ಮುಖ್ಯಂತ್ರಿಗಳು, ಇವರು ಅಧಿಕಾರಕ್ಕೆ ಬಂದರೆ ರಾಜ್ಯ ಲೂಟಿಯಾಗುತ್ತದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಐಕ್ಯತೆ, ಸಮಾನತೆ, ಸೌಹಾರ್ದತೆ ನೆಲೆಸಬೇಕಾದರೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ರಾಜ್ಯಕ್ಕೆ ಭೇಟಿ ನೀಡಿದ ಯುಪಿ ಸಿಎಂ ಆದಿತ್ಯನಾಥರು ಟಿಪ್ಪು ಜಯಂತಿ ಮತ್ತು ಹನುಮ ಜಯಂತಿಯ ಬಗ್ಗೆ ಮಾತನಾಡಿದ್ದಾರೆ. ಇದು ಸಿದ್ಧಾಂತವೆ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಇದರಿಂದ ಸಮಾಜಕ್ಕೆ ಪ್ರಯೋಜನವಿದೆಯೆ ಎಂದು ಪ್ರಶ್ನಿಸಿದರು. ಬಿಜೆಪಿ ನಾಯಕರು ಜನರ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿಲ್ಲ ಎಂದರು.

ಮುಂದಿನ 2019 ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ಮೂಲಕ ರಾಹುಲ್ ಗಾಂಧಿ ಜನರ ನಿರೀಕ್ಷೆಯಂತೆ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

See also  ಕೊಳ್ಳೇಗಾಲದಲ್ಲಿ ಸೋಂಕಿತರ ಸಾವು; ಹೊರಗಿನವರಿಗೆ ನಿರ್ಬಂಧ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು