News Kannada
Friday, December 09 2022

ಕರ್ನಾಟಕ

ಪರೇಶ ಮೇಸ್ತಾ ಕುಟುಂಬಕ್ಕೆ ಪರಿಹಾರ ವಿತರಣೆಯಲ್ಲಿ ಸರ್ಕಾರ ತಾರತಮ್ಯ: ಕ್ರಮಕ್ಕೆ ಆಗ್ರಹ

Photo Credit :

ಪರೇಶ ಮೇಸ್ತಾ ಕುಟುಂಬಕ್ಕೆ ಪರಿಹಾರ ವಿತರಣೆಯಲ್ಲಿ ಸರ್ಕಾರ ತಾರತಮ್ಯ: ಕ್ರಮಕ್ಕೆ ಆಗ್ರಹ

ಕಾರವಾರ: ಹೊನ್ನಾವರ ತಾಲ್ಲೂಕಿನಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾದ ಪರೇಶ ಮೇಸ್ತ ಸಾವಿನ ತನಿಖೆಯಲ್ಲಿ ಸರಕಾರ ತಾರತಮ್ಯ ಮಾಡುತ್ತಿದೆ ಅಲ್ಲದೆ ಸರಕಾರ ಪರಿಹಾರ ನೀಡುವಲ್ಲಿಯೂ ತಾರತಮ್ಯ ಮಾಡಿದೆ ಎಂದು ಆರೋಪಿಸಿ ಹೊನ್ನಾವರದಲ್ಲಿ ಬಿಜೆಪಿ ಪ್ರಮುಖರು ಹಾಗೂ ವಿವಿಧ ಸಂಘಟನೆಯವರು ಆರೋಪಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬಿಜೆಪಿ ಪ್ರಮುಖರು ಮಂಗಳೂರು ಭಾಗದಲ್ಲಿ ಈ ಗಲಭೆಯಲ್ಲಿ ಸಾವು ಸಂಭವಿಸಿದಾಗ ಮನೆಗೆ ಭೇಟಿ ನೀಡುವ ಮುಖ್ಯಮಂತ್ರಿ 10 ಲಕ್ಷ ಪರಿಹಾರ ನೀಡುತ್ತಾರೆ. ಆದರೆ ಹೊನ್ನಾವರದ ಪರೇಶ ಮೇಸ್ತಾ ಸಾವಿನ ನಂತರ ಈ ಪ್ರಕರ್ಣದ ಬಗ್ಗೆ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕುಟುಂಬಕ್ಕೆ 5 ಲಕ್ಷ ಪರಿಹಾರ ಈಗ ನೀಡಿ ನಂತರ ಮತ್ತೆ ಕಂತಿನ ರೀತಿಯಲ್ಲಿ ಪರೇಶ ಮೇಸ್ತಾ ಕುಟುಂಬಕ್ಕೆ ಪರಿಹಾರ ನೀಡುತ್ತಿರುವುದು ನೋಡಿದರೆ ಇದರಲ್ಲಿ ಸರಕಾರದ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಶಿವರಾಜ ಮೇಸ್ತ ಬೇಸರ ವ್ಯಕ್ತಪಡಿಸಿದರು.

ಗೃಹ ಸಚಿವ ರಾಮಲಿಂಗಾರೆಡ್ಡಿ ಸಿ.ಬಿ.ಐ ಗೆ ವಹಿಸುವ ಬಗ್ಗೆ ಮಾಧ್ಯಮಕ್ಕೆ ಹೇಳಿದರೆ ವಿನಃ ಯಾವುದೇ ದಾಖಲೆಗಳನ್ನು ನೀಡಿಲ್ಲ. ಇದು ಸಾಕ್ಷಿ ನಾಶ ಮಾಡುವ ಹುನ್ನಾರದಂತಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಸುಬ್ರಾಯ ನಾಯ್ಕ ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಪರೇಶ ಮೇಸ್ತ ತಂದೆ ಕಮಲಾಕರ ಮೇಸ್ತ, ರಾಜು ಮೇಸ್ತ,ಉಮೇಶ ಸಾರಂಗ ಹಾಗೂ ಇನ್ನಿತರರು ಇದ್ದರು.

See also  ಮೈಸೂರು ನಗರದಲ್ಲಿ ಸುಮಾರು 2 ಗಂಟೆಗಳ ಕಾಲ ಸುರಿದ ಮಳೆ ಜನ ಜೀವನ ಅಸ್ಥವಸ್ಥ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು