News Kannada
Tuesday, December 06 2022

ಕರ್ನಾಟಕ

ಟಯರ್ ರಿಮೋಡ್ ಘಟಕಕ್ಕೆ ಬೆಂಕಿ: ಲಕ್ಷಾತರ ರೂ. ಹಾನಿ

Photo Credit :

ಟಯರ್ ರಿಮೋಡ್ ಘಟಕಕ್ಕೆ ಬೆಂಕಿ: ಲಕ್ಷಾತರ ರೂ. ಹಾನಿ

ಕಾರವಾರ: ಟಯರ್ ರಿಮೋಡ್ ಘಟಕದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಸುತ್ತಲು ಬೆಂಕಿ ಹೊತ್ತಿ ಉರಿದು ಲಕ್ಷಾಂತರ ರೂ ನಷ್ಟವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿ ಗ್ರಾಮದಲ್ಲಿ ರವಿವಾರ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66ಕ್ಕೆ ಹೊಂದಿಕೊಂಡ ಕಾತ್ಯಾಯನಿ ಹೆಸರಿನ ಟಯರ್ ರಿಮೋಡ್  ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂ. ನಷ್ಟವಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಒಳಗಡೆ ಇದ್ದ ಲಕ್ಷಾಂತರ ಮೌಲ್ಯದ ಯಂತ್ರಗಳು ಹಾಗು ಟೈರ್ ಗಳು ಹೊತ್ತು ಉರಿದು ಸುಟ್ಟು ಕರಕಲಾಗಿದೆ.

ಈ ಸಂದರ್ಭದಲ್ಲಿ ಕಾರ್ಮಿಕರು ಹೊರಗಡೆ ಕೆಲಸದಲ್ಲಿ ತೊಡಗಿಕೊಂಡಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿಯ ಜ್ವಾಲೆ ತೀವ್ರತೆ ಪಡೆಯುತ್ತಿದ್ದಂತೆ ಹತ್ತಿರದಲ್ಲಿದ್ದ ಸ್ಥಳಿಯರು ಕೂಡಾ ಕಂಗಾಲಾಗಿದ್ದರು.

ಇನ್ನು ಘಟನೆ ಸಂಭವಿಸುತ್ತಿದ್ದಂತೆ ಸ್ಥಳಿಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ಆರಿಸುವಲ್ಲಿ ಯಶಸ್ವಿಯಾದರು.

ಅಂಕೋಲಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

See also  ಕುಗ್ರಾಮಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ಜನರ ಸಮಸ್ಯೆ ಆಲಿಸಿದ ಅಧಿಕಾರಿಗಳು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು