News Kannada
Thursday, December 01 2022

ಕರ್ನಾಟಕ

ಸಚಿವ ರಮಾನಾಥ ರೈ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ಪ್ರತಿಭಟನೆ

Photo Credit :

ಸಚಿವ ರಮಾನಾಥ ರೈ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ಪ್ರತಿಭಟನೆ

ಮೂಡಿಗೆರೆ: ಬಿಲ್ಲವ, ಈಡಿಗ ಸಮಾಜದ ಹಿರಿಯ ಮುಖಂಡ ಬಿ.ಜನಾರ್ಧನ ಪೂಜಾರಿ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿರುವ ಸಚಿವ ರಮಾನಾಥ ರೈ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕೆಂದು ಒತ್ತಾಯಿಸಿ ಬ್ರಹ್ಮಶ್ರೀ ನಾರಾಯಣಗುರು ಸಮಾಜಸೇವಾ ಸಂಘ ಮತ್ತು ಯುವ ಬಿಲ್ಲವ ವೇದಿಕೆಯಲ್ಲಿ ಪ್ರತಿಭಟನೆ ಮಾಡಿದರು.

ಬ್ರಹ್ಮಶ್ರೀ ನಾರಾಯಣಗುರು ಸಮಾಜಸೇವಾ ಸಂಘದ ಅಧ್ಯಕ್ಷ ಪ್ರವೀಣ್ ಪೂಜಾರಿ ಮಾತನಾಡಿ, ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡ ಜನಾರ್ಧನ ಪೂಜಾರಿ ಅವರು ನಾಡು, ನುಡಿ, ನೆಲ, ಜಲದ ಬಗ್ಗೆ ಹಾಗೂ ದೀನ ದಲಿತ, ಹಿಂದುಳಿದ ಸಮಾಜದ ಸರ್ವತೋಮುಖ ಬೆಳೆವಣಿಗೆಗಾಗಿ ತನ್ನ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಅಂತಹ ನಾಯಕನ ವಿರುದ್ಧ ಇತ್ತೀಚೆಗೆ ಸುರತ್ಕಲ್ನಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಸಾವಿರಾರು ಜನರ ಮುಂದೆ ಸಚಿವ ರಮಾನಾಥ್ ರೈ ಅವರು, ಅತ್ಯಂತ ಕೀಳು ಮಟ್ಟದ ಭಾಷೆ ಬಳಸಿ ಅವಹೇಳನಕಾರಿಯಾಗಿ ನಿಂದಿಸಿದ್ದಾರೆ.

ಇದನ್ನು ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು. ರಮಾನಾಥ್ ರೈ ಅವರ ಇಂತಹ ಮಾತುಗಳಿಂದ ಸಮಸ್ತ ಬಿಲ್ಲವ ಮತ್ತು ಈಡಿಗ ಸಮಾಜಕ್ಕೆ ತೀವ್ರ ರೀತಿಯಲ್ಲಿ ನೋವಾಗಿದೆ. ಅಲ್ಲದೆ ಸಮಾಜದಲ್ಲಿ ಅಶಾಂತಿ ಉಂಟು ಮಾಡುವಂತಾಗಿದೆ. ಹಾಗಾಗಿ ರಮಾನಾಥ್ ರೈ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಸರಕಾರ ಕೂಡಲೇ ಸಚಿವ ಸಂಪುಟದಿಂದ ಕೈಬಿಟ್ಟು ರಾಜೀನಾಮೆ ಪಡೆಯಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

 

See also  ಮನೆಯಲ್ಲಿ ಸೇರಿಕೊಂಡಿದ್ದ 12 ಅಡಿ ಉದ್ದದ ಕಾಳಿಂಗ ಮರಳಿ ಕಾಡಿಗೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

179

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು