News Kannada
Tuesday, December 06 2022

ಕರ್ನಾಟಕ

ವಿಧಾನಸಭಾ ಚುನಾವಣೆಗಾಗಿ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

Photo Credit :

ವಿಧಾನಸಭಾ ಚುನಾವಣೆಗಾಗಿ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ: ವಿಧಾನಸಭಾ ಚುನಾವಣೆ ಹಿನ್ನೆಲೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವ ಸಂಬಂಧ ತಹಶೀಲ್ದಾರರು ಮತ್ತು ವಿವಿಧ ಹಂತದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು, ಚುನಾವಣಾ ಆಯೋಗದ ನಿರ್ದೇಶನವನ್ನು ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ಚಾಚು ತಪ್ಪದೇ ಪಾಲಿಸಬೇಕು. ಯಾವುದೇ ರೀತಿಯ ಲೋಪಗಳು ಕಂಡುಬರದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧಿಸಿದಂತೆ ಜನವರಿ 22ರವರೆಗೆ ಅವಕಾಶವಿದ್ದು, ಈ ಸಂಬಂಧ ಜಾಗೃತಿ ಮೂಡಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿಗಳು ಸಲಹೆ ಮಾಡಿದರು. ಗ್ರಾಮೀಣ ಮತ್ತು ನಗರದ ಪ್ರದೇಶದ ಮತಗಟ್ಟೆ ಗುರುತಿಸುವುದು, ಪರ್ಯಾಯ ಮತಗಟ್ಟೆ ಗರುತಿಸುವುದು, ಮತಗಟ್ಟೆ ಪುನರ್ ವಿಂಗಡಣೆ, ನಂತರ ಹೊಸದಾಗಿ ಸ್ಥಾಪಿಸಿರುವ ಮತಗಟ್ಟೆಗಳ ಬಗ್ಗೆ ಮತದಾರರಿಗೆ ಮಾಹಿತಿ ನೀಡುವುದು, ಮತಗಟ್ಟೆ ಬದಲಾವಣೆ ಇದ್ದಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ವಿದ್ಯುನ್ಮಾನ ಮತಯಂತ್ರ ಮತ್ತು ವಿವಿಪ್ಯಾಟ್ ದಾಸ್ತಾನು ಮಾಡಲು ಸ್ಥಳ ಗುರುತಿಸುವುದು ಹಾಗೂ ಇವಿಎಂ ಮತ್ತು ವಿವಿಪ್ಯಾಟ್ ಕಾರ್ಯನಿರ್ವಹಣೆ ಬಗ್ಗೆ ರಾಜಕೀಯ ಪಕ್ಷದ ಮುಖಂಡರಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

See also  ಚಾಮರಾಜನಗರದಲ್ಲಿ ಬೆಡ್‌ ಸಿಗದೇ ಸೋಂಕಿತ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು