News Kannada
Thursday, December 08 2022

ಕರ್ನಾಟಕ

ಕಾಸರಗೋಡು: ಚಲಿಸುತ್ತಿದ್ದ ಲಾರಿಗೆ ಬೆಂಕಿ; ತಪ್ಪಿದ ಅವಘಡ

Photo Credit :

ಕಾಸರಗೋಡು: ಚಲಿಸುತ್ತಿದ್ದ ಲಾರಿಗೆ ಬೆಂಕಿ; ತಪ್ಪಿದ ಅವಘಡ

ಕಾಸರಗೋಡು: ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾದ ಘಟನೆ ಕಾಸರಗೋಡು ಹೊಸ ಬಸ್ ನಿಲ್ದಾಣ ಪರಿಸರದ ರಸ್ತೆಯಲ್ಲಿ ನಡೆದಿದೆ.

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು.

ಮುಂಬಯಿಯಿಂದ ಕಣ್ಣೂರು ಕಡೆಗೆ ಮೀನು ಹೇರಿಕೊಂಡು ತೆರಳುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇತರ ವಾಹನ ಪ್ರಯಾಣಿಕರು ಹಾಗೂ ನಾಗರಿಕರಲ್ಲಿ ಆತಂಕ ಉಂಟು ಮಾಡಿತು.

ಕಾಸರಗೋಡು ಹೊಸ ಬಸ್ ನಿಲ್ದಾಣ ಪರಿಸರದಲ್ಲಿ ಲಾರಿ ನಿಲುಗಡೆಗೊಳಿಸಿ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಲಾಯಿತು. ಅಗ್ನಿ ಶಾಮಕ ದಳದ ಸಿಬಂದಿ ಆಗಮಿಸಿ ಬೆಂಕಿ ನಂದಿಸಿದರು. ಲಾರಿಯ ಬ್ರೇಕ್ ಲೈನ್ ಬಿಸಿಯಾಗಿ ಟಯರ್ ಗೆ ಬೆಂಕಿ ಹತ್ತಿಕೊಂಡು ಈ ದುರಂತ ನಡೆದಿದೆ ಎನ್ನಲಾಗಿದೆ.

See also  ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ: ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್ ಸೂಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು