News Kannada
Friday, December 09 2022

ಕರ್ನಾಟಕ

ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Photo Credit :

ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ಕರ್ನಾಟಕದಲ್ಲಿ ಬಿಜೆಪಿ ಮತ್ತು ಆರ್ಎಸ್ಎಸ್ ಕಾರ್ಯಕರ್ತರ ಹತ್ಯೆ ತಡೆ ಇಲ್ಲದೇ ಮುಂದುವರಿದಿದೆ. ಇಂತಹ ಘಟನೆಗಳು ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆಗೆ ಕನ್ನಡಿ ಹಿಡಿಯುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಜ.31 ರ ಮಧ್ಯರಾತ್ರಿ ಬೆಂಗಳೂರಿನ ಜೆ.ಸಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಚೆನ್ನಪ್ಪ ಗಾರ್ಡನ್ ಬಳಿ ಸಂತೋಷ್ ಎಂಬ ಯುವಕನನ್ನು ಹತ್ಯೆ ಮಾಡಿದ್ದಾರೆ. ಕಳೆದ 3 ವರ್ಷಗಳಲ್ಲಿ ಬಿಜೆಪಿ ಮತ್ತು ಆರ್ಎಸ್ಎಸ್ ಕಾರ್ಯಕರ್ತರ ಹತ್ಯೆ ಸರಣಿಯಲ್ಲಿ ಇದು 24ನೇ ಹತ್ಯೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಈ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಬೇಕು. ಈ ಸಂಬಂಧ ತಾವು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸುವಂತೆ ಕೋರಲು ಕಾರಣಗಳಿವೆ. ಕಳೆದ ವರ್ಷ ಕಮರ್ಷಿಯಲ್ ಸ್ಟ್ರೀಟ್ನಲ್ಲಿ ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ರ ಹತ್ಯೆ ಮಾಡಲಾಯಿತು.

ಎನ್ಐಎಯು, ಪಿಎಫ್ಐ ಸಂಘಟನೆಯ 5 ಕಾರ್ಯಕರ್ತರನ್ನು ಬಂಧಿಸಿತ್ತು. ಮಂಗಳೂರಿನ ಬಿ.ಸಿ.ರೋಡ್ನಲ್ಲಿ ನಡೆದ ಶರತ್ ಮಡಿವಾಳ್ ಹತ್ಯೆಯಲ್ಲೂ ಪಿಎಫ್ಐ ಕಾರ್ಯಕರ್ತರು ಶಾಮೀಲಾಗಿರುವುದು ಸ್ಪಷ್ಟವಾಗಿದೆ. ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆಯಲ್ಲೂ ಉಗ್ರವಾದಿ ಸಂಘಟನೆಗಳ ಜೊತೆ ನಂಟಿರುವ ಬಗ್ಗೆ ಪ್ರಬಲ ಶಂಕೆಯಿದೆ.

 

See also  5ರೂ ಪಡೆದುಕೊಳ್ಳದ ಕಾರಣ 1 ಸಾವಿರ ದಂಡ ಕಟ್ಟಿದ ಕೆಎಸ್ಆರ್ ಟಿ ಸಿ ಕಂಡಕ್ಟರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

179

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು