News Kannada
Tuesday, December 06 2022

ಕರ್ನಾಟಕ

ನಗರಸಭೆ ನಿರ್ಲಕ್ಷ್ಯ ವಿರುದ್ಧ ಬಿಜೆಪಿ ಅಹೋರಾತ್ರಿ ಧರಣೆ

Photo Credit :

ನಗರಸಭೆ ನಿರ್ಲಕ್ಷ್ಯ ವಿರುದ್ಧ ಬಿಜೆಪಿ ಅಹೋರಾತ್ರಿ ಧರಣೆ

ಮಡಿಕೇರಿ: ನಗರಸಭೆಯ ಆಡಳಿತ ವೈಫಲ್ಯದ ವಿರುದ್ಧ ಮಡಿಕೇರಿ ನಗರ ಬಿಜೆಪಿ ಸಮಿತಿ 24 ಗಂಟೆಗಳ ಅಹೋ ರಾತ್ರಿ ಧರಣಿಯನ್ನು ನಗರಸಭೆ ಎದುರು ಇಂದು ಆರಂಭಿಸಿತು.

ನಗರಸಭೆಯ ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸಿರುವ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿದ್ದರೂ ನಗರದ ಯಾವುದೇ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತಿಲ್ಲವೆಂದು ಪ್ರತಿಭಟನಾಕಾರರು ಆರೋಪಿಸಿದರು.

ಫಾರಂ ಸಂಖ್ಯೆ 3ರ ಅರ್ಜಿ ವಿಲೇವಾರಿ ವಿಳಂಬ, ನಗರದಲ್ಲಿ ಶುಚಿತ್ವದ ಕೊರತೆ, ಯು.ಜಿ.ಡಿ ಕಾಮಗಾರಿಗಳ ಅವ್ಯವಸ್ಥೆ, ನಗರಸಭೆಯನ್ನು ಕಾಡುತ್ತಿರುವ ನೌಕರರ ಕೊರತೆ, ಸ್ಟೋನ್ಹಿಲ್ ಬಳಿ ಅವೈಜ್ಞಾನಿಕ ರೀತಿಯಲ್ಲಿ ಕಸವಿಲೇವಾರಿ ಮಾಡುತ್ತಿರುವುದರಿಂದ ಸುಬ್ರಮಣ್ಯ ನಗರದಲ್ಲಿ ಉಂಟಾಗಿರುವ ಅಶುಚಿತ್ವದ ವಾತಾವರಣ, ವಾಸದೃಢೀಕರಣ ಪತ್ರ ಮತ್ತು ಜನನ ಮರಣ ಪತ್ರ ನೀಡುವಲ್ಲಿ ವಿನಾಕಾರಣ ವಿಳಂಬ, ಮನೆ ಮತ್ತು ಕಟ್ಟಡಗಳ ಕಾಮಗಾರಿ ಮುಕ್ತಾಗೊಂಡ ಬಗ್ಗೆ ಪ್ರಮಾಣ ಪತ್ರ ನೀಡಲು ಅಡಚಣೆ, ನಗರಕ್ಕೆ ಆಗಮಿಸುವ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ, ಪಾರ್ಕಿಂಗ್ ವ್ಯವಸ್ಥೆ ಮತ್ತು ಸೂಕ್ತ ಮಾಹಿತಿಯನ್ನು ಒದಗಿಸದೆ ಇರುವುದು, ಗಾಂಧಿ ಮೈದಾನದಲ್ಲಿ ನಿಯಮ ಬಾಹಿರವಾಗಿ ವ್ಯಾಪಾರ ನಡೆಸಲು ಅವಕಾಶ ನೀಡುತ್ತಿರುವುದು, ಮಹದೇವಪೇಟೆ ರಸ್ತೆ ಅವ್ಯವಸ್ಥೆ, ನಗರದಲ್ಲಿ ಎಲ್ಲೆಂದರಲ್ಲಿ ಅನಧಿಕೃತವಾಗಿ ತಲೆ ಎತ್ತುತ್ತಿರುವ ಶೀಟ್ಗಳ ಅಂಗಡಿ ಮಳಿಗೆಗಳು ಮತ್ತು ತೆರಿಗೆ ವಂಚನೆ, ಪಾರ್ಕಿಂಗ್ ವ್ಯವಸ್ಥೆ ಇಲ್ಲದಿದ್ದರೂ ಸುಂಕವಸೂಲಿ ಮಾಡುತ್ತಿರುವುದು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಆಡಳಿತ ವ್ಯವಸ್ಥೆ ನಡುವಿನ ಹೊಂದಾಣಿಕೆಯ ಕೊರತೆ ಸೇರಿದಂತೆ ಅನೇಕ ಅವ್ಯವಸ್ಥೆಗಳ ವಿರುದ್ಧ ನಮ್ಮ ಪ್ರತಿಭಟನೆ ಎಂದು ಬಿಜೆಪಿ ನಗರಾಧ್ಯಕ್ಷರಾದ ಮಹೇಶ್ ಜೈನಿ ತಿಳಿಸಿದರು.

ಪ್ರತಿಭಟನೆಯಲ್ಲಿ ಸಾಂಕೇತಿಕವಾಗಿ ಪಾಲ್ಗೊಂಡ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ನಗರಸಭೆಯ ಕಾರ್ಯವೈಖರಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ನಗರಸಭೆಯ ಉಪಾಧ್ಯಕ್ಷರಾದ ಟಿ.ಎಸ್.ಪ್ರಕಾಶ್, ಬಿಜೆಪಿ ಸದಸ್ಯರುಗಳು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ನಾಪಂಡ ರವಿಕಾಳಪ್ಪ, ರಾಬಿನ್ ದೇವಯ್ಯ, ಉಪಾಧ್ಯಕ್ಷರಾದ ಬಿ.ಕೆ.ಅರುಣ್, ನಗರ ಬಿಜೆಪಿ ಉಪಾಧ್ಯಕ್ಷರಾದ ಬಿ.ಕೆ.ಜಗದೀಶ್, ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಸುಬ್ರಮಣಿ, ಬಿ.ಎಂ.ರಾಜೇಶ್, ಮಹಿಳಾ ಮೋರ್ಚಾದ ನಗರಾಧ್ಯಕ್ಷರಾದ ಅನಿತಾಪೂವಯ್ಯ, ಯುವ ಮೋರ್ಚಾದ ನಗರಾಧ್ಯಕ್ಷರಾದ ಡಿಶು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

See also  ಕುಡಿಯುವ ನೀರಿನ ಘಟಕಕ್ಕೆ ಶಾಸಕ ಅಪ್ಪಚ್ಚು ರಂಜನ್ ಚಾಲನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು