News Kannada
Tuesday, November 29 2022

ಕರ್ನಾಟಕ

ಕಣ್ಣೂರಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ - 1 min read

Photo Credit :

ಕಣ್ಣೂರಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಕಾಸರಗೋಡು: ಕಣ್ಣೂರು ಮಟ್ಟನ್ನೂರಿನಲ್ಲಿ ಯುವ ಕಾಂಗ್ರೆಸ್  ಕಾರ್ಯಕರ್ತನನ್ನು ಬಾಂಬೆಸೆದು ಬಳಿಕ ಮಚ್ಚಿನಿಂದ ಕಡಿದು ಕೊಲೆಗೈದ ಘಟನೆ ನಿನ್ನೆ ತಡ ರಾತ್ರಿ ನಡೆದಿದೆ.

ಕೊಲೆಗೀಡಾದವನನ್ನು ಯುವ ಕಾಂಗ್ರೆಸ್ ಮಟ್ಟನ್ನೂರು ಬ್ಲಾಕ್ ಕಾರ್ಯದರ್ಶಿ ಶುಹೈಬ್ (30) ಎಂದು ಗುರುತಿಸಲಾಗಿದೆ.

ಶುಹೈಬ್ ನ ಜೊತೆಗಿದ್ದ ನಾಲ್ವರು ಗಾಯಗೊಂಡಿದ್ದು, ಈ ಪೈಕಿ ನೌಶಾದ್ (29), ರಿಯಾಜ್ (28) ಅವರನ್ನು ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಹೈಬ್ ನ ಮೇಲೆ ಹಲ್ಲೆ ನಡೆಸುವುದನ್ನು ತಡೆಯಲೆತ್ನಿಸಿದಾಗ ಇವರ ಮೇಲೆಯೂ  ತಂಡ ದಾಳಿ ನಡೆಸಿದೆ.

ಕೃತ್ಯವನ್ನು ಖಂಡಿಸಿ ಯುಡಿಎಫ್ ಇಂದು ಕಣ್ಣೂರು ಜಿಲ್ಲೆಯಲ್ಲಿ ಹರತಾಳಕ್ಕೆ ಕರೆ ನೀಡಿದೆ.

ವ್ಯಾನ್ ನಲ್ಲಿ ಬಂದ ತಂಡವು ಈ ಕೃತ್ಯ ನಡೆಸಿದೆ ಎನ್ನಲಾಗಿದೆ. ರಸ್ತೆ ಬದಿಯ ಗೂಡಂಗಡಿಯಲ್ಲಿ ಚಹಾ ಕುಡಿಯುತ್ತಿದ್ದ ಸಂದರ್ಭದಲ್ಲಿ ಶುಹೈಬ್ ನ ಮೇಲೆ ಮೊದಲು ಬಾಂಬ್ ಎಸೆದ  ತಂಡವು ಬಳಿಕ ಕಡಿದು ಪರಾರಿಯಾಗಿದೆ.

ಕೆಲ ದಿನಗಳ ಹಿಂದೆ ಎಡಯನ್ನೂರು ಎಂಬಲ್ಲಿ ಎಸ್ ಎಫ್ ಐ ಮತ್ತು ಕಾಂಗ್ರೆಸ್ ನ ವಿದ್ಯಾರ್ಥಿ ಸಂಘಟನೆಯಾದ ಕೆಎಸ್ ಯು ನಡುವೆ ಘರ್ಷಣೆ ನಡೆದಿತ್ತು, ಈ ದ್ವೇಷ ಘಟನೆಗೆ ಕಾರಣ ಎನ್ನಲಾಗಿದೆ.

ಸ್ಥಳದ್ಲಲಿ ಪೊಲೀಸ್  ಬಂದೋಬಸ್ತ್ ಏರ್ಪಡಿಸಲಾಗಿದ್ದು , ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಂಡಿದ್ದಾರೆ.

See also  'ಆರೋಹಣ ಕೊಡಗು' ತಂಡದಿಂದ ವಿಶೇಷ ಪರಿಸರ ಕಾಳಜಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು