News Kannada
Sunday, September 25 2022

ಕರ್ನಾಟಕ

ಜಿಲ್ಲಾಧಿಕಾರಿ ಭರವಸೆಗೂ ಮಣಿಯದ ದೇವರಪುರ ಹಾಡಿ ಜನ: ಮುಂದುವರಿದ ಪ್ರತಿಭಟನೆ - 1 min read

Photo Credit :

ಜಿಲ್ಲಾಧಿಕಾರಿ ಭರವಸೆಗೂ ಮಣಿಯದ ದೇವರಪುರ ಹಾಡಿ ಜನ: ಮುಂದುವರಿದ ಪ್ರತಿಭಟನೆ

ಮಡಿಕೇರಿ: ವೀರಾಜಪೇಟೆ ತಾಲೂಕಿನ ಹೆಬ್ಬಾಲೆ ದೇವರಪುರ ಗ್ರಾಮದಲ್ಲಿರುವ ಪರಿಶಿಷ್ಟ ಪಂಗಡದ ಸುಮಾರು 150 ಕುಟುಂಬಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಹಾಗೂ ಹಾಡಿಯ ನಿವಾಸಿಗಳು ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಶನಿವಾರ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಧರಣಿ ನಿರತರ ಅಹವಾಲುಗಳನ್ನು ಆಲಿಸಿದರು. ಶಾಶ್ವತ ಕುಡಿಯುವ ನೀರು ಹಾಗೂ ಮೂಲಭೂತ ಸೌಲಭ್ಯಗಳನ್ನು ನೀಡದ ಹೊರತು ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲವೆಂದು ಸಮಿತಿಯ ಪ್ರಮುಖರು ತಿಳಿಸಿದರು.

ಸುಮಾರು 150ಕ್ಕೂ ಹೆಚ್ಚಿನ ಕುಟುಂಬಗಳು ವಾಸಿಸುತ್ತಿದ್ದರೂ ಇಲ್ಲಿಯವರೆಗೆ ಸರಕಾರ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಯಾವುದೇ ಮೂಲಭೂತ ಸೌಲಭ್ಯಗಳನ್ನು ನೀಡಿಲ್ಲವೆಂದು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು, ಜಾಗದ ವಿವಾದ ನ್ಯಾಯಾಲಯದಲ್ಲಿರುವುದರಿಂದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಿಲ್ಲ. ಆದರೂ ಮಾನವೀಯ ದೃಷ್ಟಿಯಿಂದ ಕುಡಿಯುವ ನೀರನ್ನು ಟ್ಯಾಂಕರ್ ಗಳ ಮೂಲಕ ಭಾನುವಾರದಿಂದಲೇ ಪೂರೈಸುವುದಾಗಿ ಭರವಸೆ ನೀಡಿದರಲ್ಲದೆ, ಧರಣಿಯನ್ನು ಕೈಬಿಡುವಂತೆ ಸೂಚಿಸಿದರು. ಇದಕ್ಕೆ ಒಪ್ಪದ ಧರಣಿ ನಿರತರು, ಶಾಶ್ವತ ಕುಡಿಯುವ ನೀರಿನ ಜೊತೆಗೆ ತಾತ್ಕಾಲಿಕ ಶೌಚಾಲಯ ಹಾಗೂ ಸೋಲಾರ್ ಬೀದಿದೀಪ ಅಳವಡಿಸುವಂತೆ ಪಟ್ಟುಹಿಡಿದರು. ಇವುಗಳನ್ನು ಒದಗಿಸುವವರೆಗೆ ಆಹೋರಾತ್ರಿ ಧರಣಿ ಮುಂದುವರೆಸುವುದಾಗಿ ಹೇಳಿದರು.

See also  ಹುಣಸೂರಿನ ರೈತ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು