News Kannada
Tuesday, September 27 2022

ಕರ್ನಾಟಕ

ವಿಧಾನಸಭಾ ಚುನಾವಣೆ: ಅಗತ್ಯ ಸಿದ್ಧತೆಗೆ ಶಿವಯೋಗಿ ಕಳಸದ ನಿರ್ದೇಶನ - 1 min read

Photo Credit :

ವಿಧಾನಸಭಾ ಚುನಾವಣೆ: ಅಗತ್ಯ ಸಿದ್ಧತೆಗೆ ಶಿವಯೋಗಿ ಕಳಸದ ನಿರ್ದೇಶನ

ಮಡಿಕೇರಿ: ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಜಿಲ್ಲಾಡಳಿತ ಇದುವರೆಗೆ ಕೈಗೊಂಡಿರುವ ಸಿದ್ಧ್ದತೆ ಬಗ್ಗೆ ಜಿಲ್ಲಾಧಿಕಾರಿ ಅವರಿಂದ ಪ್ರಾದೇಶಿಕ ಆಯುಕ್ತರಾದ ಶಿವಯೋಗಿ ಕಳಸದ ಮಾಹಿತಿ ಪಡೆದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಪ್ರಾದೇಶಿಕ ಆಯುಕ್ತರು, ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ, ಮತದಾರರ ಪಟ್ಟಿ ಸಿದ್ಧತೆ, ವಿದ್ಯುನ್ಮಾನ ಮತಯಂತ್ರ, ವಿವಿ ಪ್ಯಾಟ್, ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಹೊಸ ಮತದಾರರ ಪಟ್ಟಿ ಪ್ರಕಟ, ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವದಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸುವುದು. ಹೊಸ ಮತದಾರರಿಗೆ ಚುನಾವಣೆ ಗುರುತಿನ ಚೀಟಿ ನೀಡುವುದು, ಸರ್ಕಾರಿ ಸೇವೆಯಲ್ಲಿರುವವರು ಅಂಚೆಮತ ಪತ್ರದ ಮೂಲಕ ಮತ ಚಲಾಯಿಸುವಂತಾಗಲು ಮಾಹಿತಿ ನೀಡುವುದು ಮತ್ತಿತರ ವಿಚಾರದ ಬಗ್ಗೆ ಚರ್ಚೆ ನಡೆಸಿದರು. 

ಚುನಾವಣಾ ಅಧಿಕಾರಿಗಳು ಹಾಗೂ ಸೆಕ್ಟರ್ ಅಧಿಕಾರಿಗಳ ನಿಯೋಜನೆ, ವಲ್ನರಬಲ್ ಪ್ರದೇಶ ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳುವುದು. ಅರಣ್ಯ ಪ್ರದೇಶದಲ್ಲಿರುವ ಮತಗಟ್ಟೆ ಕೇಂದ್ರಗಳಲ್ಲಿ ದೂರವಾಣಿ ಸಂಪರ್ಕ ಅಥವಾ ವಯರ್ ಲೆಸ್ ಸೇವೆ ಕಲ್ಪಿಸುವುದು. ಅರಣ್ಯ ಪ್ರದೇಶದ ಮತಗಟ್ಟೆ ನಿಯೋಜಿಸುವ ಸಿಬ್ಬಂದಿಗಳಿಗೆ ಕುಡಿಯುವ ನೀರು ಮತ್ತು ಊಟದ ವ್ಯವಸ್ಥೆ ಮಾಡುವುದು, ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಸ್ಥಳ ಗುರುತಿಸುವುದು. ಮತಗಟ್ಟೆಗಳಲ್ಲಿ ವಿದ್ಯುತ್ ಸಂಪರ್ಕ, ಕುಡಿಯುವ ನೀರು, ರ್ಯಾಂಪಿಂಗ್ ವ್ಯವಸ್ಥೆ ಮಾಡುವುದು ಮತ್ತಿತರ ಚುನಾವಣೆಗೆ ಸಂಬಂಧಿಸಿದಂತೆ ಹಲವು ಸಲಹೆ, ಮಾರ್ಗದರ್ಶನ ನೀಡಿದರು.

ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ, ರಾಜಕೀಯ ಪಕ್ಷದ ಮುಖಂಡರೊಂದಿಗೆ ಒಂದು ಸುತ್ತಿನ ಸಭೆ ನಡೆಸಲಾಗಿದೆ. ವಿದ್ಯುನ್ಮಾನ ಮತಯಂತ್ರಗಳನ್ನು ತರಿಸಿಕೊಳ್ಳಲಾಗಿದೆ, ನೂತನ ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಮತಗಟ್ಟೆ ಕೇಂದ್ರಗಳನ್ನು ಗುರುತಿಸಲಾಗಿದ್ದು, ಈ ಕೇಂದ್ರಗಳಲ್ಲಿ ಅಗತ್ಯ ಮೂಲಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ವಿದ್ಯುನ್ಮಾನ ಮತಯಂತ್ರಗಳನ್ನು ತರಿಸಿಕೊಳ್ಳಲಾಗಿದೆ. ಜೊತೆಗೆ ಚುನಾವಣಾಧಿಕಾರಿಗಳಿಗೆ ತರಬೇತಿ ನಿಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ವಲ್ನರಬಲ್ ಪ್ರದೇಶವನ್ನು ಗುರುತಿಸಲಾಗಿದ್ದು, ಅಂತ ಪ್ರದೇಶಗಳಲ್ಲಿ ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು ಅವರು ಮಾಹಿತಿ ನೀಡಿದರು.

See also  ಅಟಲ್ ಪೆನ್ಶನ್ ಯೋಜನೆಯ ಅನುಷ್ಠಾನ - ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿಗೆ ಮತ್ತೆ ರಾಷ್ಟ್ರೀಯ ಪುರಸ್ಕಾರ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು