News Kannada
Tuesday, October 04 2022

ಕರ್ನಾಟಕ

ಗೋಪಾಲಸ್ವಾಮಿಬೆಟ್ಟದಲ್ಲಿ ಹಿಮವದ್ ಗೋಪಾಲಸ್ವಾಮಿ ರಥೋತ್ಸವ - 1 min read

Photo Credit :

ಗೋಪಾಲಸ್ವಾಮಿಬೆಟ್ಟದಲ್ಲಿ ಹಿಮವದ್ ಗೋಪಾಲಸ್ವಾಮಿ ರಥೋತ್ಸವ

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನದ ಹುಲಿ ಯೋಜನೆಗೆ ಒಳಪಡುವ ಗೋಪಾಲಸ್ವಾಮಿಬೆಟ್ಟದಲ್ಲಿ ಹಿಮವದ್ ಗೋಪಾಲಸ್ವಾಮಿಯವರ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.

ರಥೋತ್ಸವ ಹಿನ್ನಲೆಯಲ್ಲಿ ಬೆಳಗಿನಿಂದಲೇ ಹಲವಾರು ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ಮಧ್ಯಾಹ್ನ 12.30 ಗಂಟೆಗೆ ಸರಿಯಾಗಿ ಉತ್ಸವ ಮೂರ್ತಿಯನ್ನು ದೇವಸ್ಥಾನದ ಸುತ್ತಲೂ ಪ್ರದಕ್ಷಿಣೆ ಮಾಡಿಸಿ ಬಳಿಕ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಬಳಿಕ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಗೀತಾಮಹದೇವಪ್ರಸಾದ್, ತಾಪಂ ಅಧ್ಯಕ್ಷ ಜಗದೀಶಮೂರ್ತಿ ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು.

ಬೆಟ್ಟದ ತಪ್ಪಲಿನಲ್ಲಿನ ಗೋಪಾಲಪುರ ಗ್ರಾಮಸ್ಥರು ಅರಣ್ಯದಲ್ಲಿ ಸಿಗುವ ಅಂಬಿನಿಂದ ತಯಾರಿಸಿದ ಹಗ್ಗವನ್ನು ಕಟ್ಟಿದ ರಥವನ್ನು ಎಳೆಯಲಾರಂಭಿಸಿದರು. ಗೋವಿಂದಾ ಗೋವಿಂದಾ ಎಂಬ ಘೋಷಗಳ ನಡುವೆ ಭಕ್ತರು ಹಣ್ಣು ದವನಗಳನ್ನು ಎಸೆದು ಪುನೀತರಾದರು.

ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶವನ್ನು ನಿಷೇಧಿಸಿದ್ದರಿಂದ ಭಕ್ತರೆಲ್ಲರೂ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿಯೇ ಪ್ರಯಾಣಿಸಬೇಕಾಗಿತ್ತು. ರಥೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳಿಗಾಗಿ ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯಗಳ ಸೌಲಭ್ಯವನ್ನು ಮಾಡಲಾಗಿದ್ದರೂ ಶೌಚಾಲಯ ಸೌಲಭ್ಯವಿಲ್ಲದೆ ಮಹಿಳೆಯರು ಪರದಾಡುವಂತಾಗಿತ್ತು. ಭಕ್ತರು ಹಾಗೂ ಪ್ರವಾಸಿಗರಿಗೆ ದಾನಿಗಳಿಂದ ಪ್ರಸಾದ ವ್ಯವಸ್ಥೆ ಹಾಗೂ ಪಟ್ಟಣದ ಪೊಲೀಸರಿಂದ ಮಜ್ಜಿಗೆ ವಿತರಣೆ ನಡೆಸಲಾಯಿತು. ಪೊಲೀಸ್, ಅರಣ್ಯ, ಕಂದಾಯ, ಆರೋಗ್ಯ ಇಲಾಖೆಯ ಅಧಿಕಾರಿಗಳು ತಕ್ಕ ವ್ಯವಸ್ಥೆಗಳನ್ನು ಮಾಡಿದ್ದರು

See also  ಟಿಪ್ಪು ಬದಲು ಅಬ್ದುಲ್ ಕಲಾಂ ಜಯಂತಿಗೆ ಪ್ರಸ್ತಾವನೆ: ಸಚಿವ ಶ್ರೀರಾಮುಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು