ದಾವಣಗೆರೆ: ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ಶಿಫಾರಸು ಮಾಡಿರುವುದಕ್ಕೆ ಈಗ ಕಾಂಗ್ರೆಸ್ ನಲ್ಲೇ ಭಿನ್ನಾಭಿಪ್ರಾಯ ಕೇಳಿಬಂದಿದ್ದು, ಕಾಂಗ್ರೆಸ್ ನ ಹಿರಿಯ ನಾಯಕ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಯೂ ಟರ್ನ್ ಹೊಡೆದಿದ್ದಾರೆ.
ನಿನ್ನೆ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದ ಶಿವಶಂಕರಪ್ಪ ಅವರು, ಪ್ರತ್ಯೇಕ ಧರ್ಮಕ್ಕೆ ಶಿಫಾರಸು ಅನ್ಯಾಯದ ಪರಮಾವಧಿ. ಇದಕ್ಕೆ ನಮ್ಮ ವಿರೋಧವಿದೆ ಎಂದು ಅವರು ಹೇಳಿದರು.
ನಿನ್ನೆ ಗೊಂದಲದಲ್ಲಿ ಹೇಳಿಕೆ ನೀಡಿದ್ದೆ. ಆ ಹೇಳಿಕೆಯನ್ನು ನಾನು ಹಿಂದಕ್ಕೆ ಪಡೆಯುತ್ತೇನೆ. ವೀರಶೈ-ಲಿಂಗಾಯತ ಎರಡೂ ಒಂದೇ ಎನ್ನುವ ನಮ್ಮ ಮೊದಲಿನ ನಿರ್ಧಾರಕ್ಕೆ ಅಂಟಿಕೊಳ್ಳುತ್ತೇವೆ. ಸರ್ಕಾರದ ನಿರ್ಧಾರವನ್ನು ವೀರಶೈವ ಮಹಾಸಭಾ ಒಪ್ಪುವುದಿಲ್ಲ ಎಂದು ತಿಳಿಸಿದರು.