News Kannada
Thursday, December 08 2022

ಕರ್ನಾಟಕ

ಮತದಾನದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಿ: ಜಿಲ್ಲಾಧಿಕಾರಿ ಶ್ರೀವಿದ್ಯಾ ಕರೆ

Photo Credit :

ಮತದಾನದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಿ: ಜಿಲ್ಲಾಧಿಕಾರಿ ಶ್ರೀವಿದ್ಯಾ ಕರೆ

ಮಡಿಕೇರಿ: ಮತದಾನ ಪ್ರಕ್ರಿಯೆಯಲ್ಲಿ 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬರೂ ಉತ್ಸಾಹದಿಂದ ಪಾಲ್ಗೊಳ್ಳುವಂತಾಗಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಕರೆ ನೀಡಿದ್ದಾರೆ.

ನಗರದ ಗಾಂಧಿ ಮೈದಾನದಲ್ಲಿ ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಜಾಗೃತಿ ಸಮಿತಿ ವತಿಯಿಂದ ಶನಿವಾರ ನಡೆದ ಮ್ಯಾರಥಾನ್ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಹದಿನೆಂಟು ವರ್ಷ ಪೂರ್ಣಗೊಂಡ ಪ್ರತಿಯೊಬ್ಬರೂ ಮತದಾನ ಮಾಡುವಂತಾಗಬೇಕು ಎಂಬ ಉದ್ದೇಶದಿಂದ ಚುನಾವಣಾ ಆಯೋಗವು ಮತದಾನದ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಮೂಲಕ (ಸ್ವೀಪ್) ನಾನಾ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ವಿವಿಧ ವಯೋಮಾನದವರಿಗೆ ಓಟ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಅವರು ತಿಳಿಸಿದರು.

ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವುದು ಅತ್ಯಗತ್ಯ. 18 ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡುವಂತಾಗಬೇಕು. ಆ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಏಪ್ರಿಲ್ 08ರಂದು ‘ಮಿಂಚಿನ ನೋಂದಣಿ’ ಅಭಿಯಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಜಿಲ್ಲೆಯ ಎಲ್ಲಾ ಬೂತ್ ಮಟ್ಟದಲ್ಲಿ, ತಾಲೂಕು ತಹಶೀಲ್ದಾರರ ಕಚೇರಿ, ಉಪ ವಿಭಾಗಾಧಿಕಾರಿಯವರ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಸ್ವೀಪ್ ಸಮಿತಿ ಸದಸ್ಯರಾದ ಮಂಜುಳಾ, ಮಲ್ಲೇಸ್ವಾಮಿ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಮಮ್ತಾಜ್, ದೇವರಾಜು, ಡಾ.ಆನಂದ್, ಸವಿತಾ ಇತರರು ಇದ್ದರು. ಓಟ ಸ್ಪರ್ಧೆಯು ಗಾಂಧಿ ಮೈದಾನದಿಂದ ಇಂದಿರಾ ಕ್ಯಾಂಟೀನ್, ಎಫ್.ಎಂ.ಕೆ.ಎಂ.ಸಿ. ಕಾಲೇಜಿನವರೆಗೆ ನಡೆಯಿತು.

See also  ಕುಡಿಯುವ ನೀರಿಗಾಗಿ ಸದಸ್ಯರ ಹಾಹಾಕಾರ: ಟ್ಯಾಂಕರ್ ಗೆ ರೂ.10 ಲಕ್ಷ ಮೀಸಲಿಟ್ಟ ನಗರಸಭೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು