News Kannada
Monday, November 28 2022

ಕರ್ನಾಟಕ

ಏ.27ರಂದು ಗೋಣಿಕೊಪ್ಪಕ್ಕೆ ರಾಹುಲ್ ಗಾಂಧಿ ಭೇಟಿ: ಪೊಲೀಸ್ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ - 1 min read

Photo Credit :

ಏ.27ರಂದು ಗೋಣಿಕೊಪ್ಪಕ್ಕೆ ರಾಹುಲ್ ಗಾಂಧಿ ಭೇಟಿ: ಪೊಲೀಸ್ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

ಮಡಿಕೇರಿ: ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಕಾವು ರಂಗೇರುತ್ತಿದ್ದು, ಏ.27ರಂದು ಮಧ್ಯಾಹ್ನ 3 ಗಂಟೆಗೆ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು ವಿರಾಜಪೇಟೆ ಕ್ಷೇತ್ರದ ಗೋಣಿಕೊಪ್ಪಕ್ಕೆ ಭೇಟಿ ನೀಡಲಿದ್ದಾರೆ.

ಕಾವೇರಿ ಕಾಲೇಜು ಮೈದಾನಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಲಿರುವ ಅವರು ಕಾಲೇಜು ಆವರಣದಲ್ಲಿರುವ ಕಾವೇರಿ ಪುತ್ತಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಸಮೀಪದಲ್ಲಿರುವ ವೀರಸೇನಾನಿಗಳಾದ ಫೀ.ಮಾ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಕಾರಿನಲ್ಲಿ ನೇರವಾಗಿ ದಸರಾ ಮೈದಾನಕ್ಕೆ ತೆರಳಿ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ.

ರಾಹುಲ್ ಗಾಂಧಿ ಭೇಟಿ ಹಿನ್ನೆಲೆಯಲ್ಲಿ ದಸರಾ ಮೈದಾನಕ್ಕೆ ಆಗಮಿಸಿದ ಕೊಡಗು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಹಾಗೂ ಭದ್ರತಾ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಮುಕ್ಕಾಟಿರ ಶಿವು ಮಾದಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸಿನ ಅಧ್ಯಕ್ಷ ಧರ್ಮಜ, ಹಿರಿಯ ಮುಖಂಡರಾದ ಅಜಿತ್ಅಯ್ಯಪ್ಪ ಹಾಜರಿದ್ದರು.

ರಾಹುಲ್ ಗಾಂಧಿ ಅವರೊಂದಿಗೆ ಪಕ್ಷದ ರಾಜ್ಯಾಧ್ಯಕ್ಷರಾದ ಡಾ.ಜಿ.ಪರಮೆಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಅನೇಕ ನಾಯಕರು ಆಗಮಿಸಲಿದ್ದಾರೆ ಎಂದು ಶಿವು ಮಾದಪ್ಪ ತಿಳಿಸಿದ್ದಾರೆ.

See also  ಕೊಡಗಿನಲ್ಲಿ ಸೋಂಕಿತರ ಸಂಖ್ಯೆ 131 ಕ್ಕೆ ಏರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು