News Kannada
Thursday, December 01 2022

ಕರ್ನಾಟಕ

ಕೇಂದ್ರದ ಯೋಜನೆ ರಾಜ್ಯದಲ್ಲಿ ಅನುಷ್ಠಾನವಾಗಿಲ್ಲ: ತೇಜಸ್ವಿನಿ ಗೌಡ ಆರೋಪ

Photo Credit :

ಕೇಂದ್ರದ ಯೋಜನೆ ರಾಜ್ಯದಲ್ಲಿ ಅನುಷ್ಠಾನವಾಗಿಲ್ಲ: ತೇಜಸ್ವಿನಿ ಗೌಡ ಆರೋಪ

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಠಾನವಾಗಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಬಿಡಲಿಲ್ಲ ಎಂದು ಮಾಜಿ ಸಂಸದೆ ತೇಜಸ್ವಿನಿ ಗೌಡ ಆರೋಪಿಸಿದ್ದಾರೆ.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಠಾನ ಮಾಡದೇ ಸೋಮಾರಿತನ ಪ್ರದರ್ಶನ ಮಾಡಿ, ದೇಶದ ಅಭಿವೃದ್ದಿಯಲ್ಲಿ ನಿರ್ಲಕ್ಷ್ಯ ವಹಿಸಿದ್ದು, ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ಕೊನೆಗಾಣಿಸಲು ರಾಜ್ಯದ ಮತದಾರರು ನಿರ್ಧಾರ ಮಾಡಿದ್ದಾರೆ ಎಂದರು.

ಬೆಂಗಳೂರು ಪಟ್ಟಣದ ಅಭಿವೃದ್ದಿಗೆ ನಿರ್ಲಕ್ಷ್ಯ ಮಾಡಿದ್ದಾರೆ. ಬಹಳಷ್ಟು ಕೇಂದ್ರದ ಯೋಜನೆಗಳು ಬಡವರಿಗೆ ತಲುಪಿಸಲು ರಾಜ್ಯ ಸರ್ಕಾರ ಮೀನಾ ಮೇಷ ಎಣಿಸಿತು. ನರೇಂದ್ರ ಮೋದಿ ಅವರನ್ನು ಟೀಕೆ ಮಾಡುವ ಮೂಲಕ ಸಿದ್ಧರಾಮಯ್ಯ ಕಾಂಗ್ರೆಸ್ ಯುವ ನೇತಾರ ರಾಹುಲ್‍ ಗಾಂಧಿಯನ್ನು ಮೆಚ್ಚಿಸಿಕೊಂಡು ಕುರ್ಚಿ ಗಟ್ಟಿ ಮಾಡಿಕೊಂಡಿದ್ದೇ ದೊಡ್ಡ ಸಾಧನೆಯಾಗಿದೆ ಎಂದು ಲೇವಡಿ ಮಾಡಿದರು.

ಕಳೆದ ಚುನಾವಣೆಯಲ್ಲಿ ಘೋಷಣೆ ಮಾಡಿದ್ದ ಪ್ರಣಾಳಿಕೆಯಲ್ಲಿನ ಅಂಶಗಳನ್ನು ಶೇ.50 ರಷ್ಟು ಸಹ ಈಡೇರಿಸಲು ಸಾಧ್ಯವಾಗಿಲ್ಲ. ಈಗ ರಾಹುಲ್ ಗಾಂಧಿ ಅವರು ಮಂಗಳೂರಿನಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವುದು ಹಾಸ್ಯಾಸ್ಪದವಾಗಿದೆ ಎಂದರು.

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ದೇಶದ ಜನರನ್ನು ಕತ್ತಲಲ್ಲಿ ಇಟ್ಟಿತ್ತು. ಇದರ ಪರಿಣಾಮವಾಗಿಯೇ ದೇಶದಲ್ಲಿ 2 ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿ ಉಳಿದುಕೊಂಡಿದೆ. ಮೇ 15ರ ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್ ಕರ್ನಾಟಕವನ್ನು ಕಳೆದುಕೊಂಡು ಕೇವಲ ಒಂದು ರಾಜ್ಯದಲ್ಲಿ ಉಳಿದುಕೊಳ್ಳಲಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಮೆಚ್ಚಿ ಇಡೀ ದೇಶದ ಜನರು ಜೈ ಎಂದಿದ್ದಾರೆ. ಕರ್ನಾಟಕದ ಮತದಾರರು ಸಹ ಬಿಜೆಪಿಗೆ ನಿಚ್ಚಳ ಬಹುಮತವನ್ನು ನೀಡಲಿದ್ದಾರೆ. ಯುಡಿಯೂರಪ್ಪ ಅವರು 5 ವರ್ಷಗಳ ಕಾಲ ಪೂರ್ಣ ಪ್ರಮಾಣದಲ್ಲಿ ಮುಖ್ಯಮಂತ್ರಿಗಳಾಗಿ ಅಧಿಕಾರ ನಡೆಸಲಿದ್ದಾರೆ ಎಂದು ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

See also  ಆದಾಯ ತೆರಿಗೆ ಅಧಿಕಾರಿಗಳ ದಾಳಿ: ಕೋಟ್ಯಂತರ ರೂ.ಹವಾಲ ಹಣ, ಚಿನ್ನ ವಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು