News Kannada
Tuesday, November 29 2022

ಕರ್ನಾಟಕ

ಸಿಎಂನಿಂದಾಗಿ ಮೇಲುಕೋಟೆ ಕಾಂಗ್ರೆಸ್ ಮುಕ್ತ: ಪುಟ್ಟರಾಜು ವ್ಯಂಗ್ಯ - 1 min read

Photo Credit :

ಸಿಎಂನಿಂದಾಗಿ ಮೇಲುಕೋಟೆ ಕಾಂಗ್ರೆಸ್ ಮುಕ್ತ: ಪುಟ್ಟರಾಜು ವ್ಯಂಗ್ಯ

ಪಾಂಡವಪುರ: ಮೇಲುಕೋಟೆ ಕ್ಷೇತ್ರವನ್ನು ಕಾಂಗ್ರೆಸ್ ಮುಕ್ತ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಾಗಿರುವುದಾಗಿ ಜೆಡಿಎಸ್ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು ವ್ಯಂಗ್ಯವಾಡಿದ್ದಾರೆ.

ಕ್ಷೇತ್ರದಲ್ಲಿ ರೈತಸಂಘ ಹಾಗೂ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಪರ್ವ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡ್ಯ ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸವೇ ಇತ್ತು. ಸಿದ್ದರಾಮಯ್ಯ ಬಂದ ಮೇಲೆ ಅನೇಕ ದಿಗ್ಗಜರು ಪಕ್ಷವನ್ನು ಬಿಡಬೇಕಾಯಿತು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಪಕ್ಷ ತ್ಯಜಿಸಿದ್ದಾರೆ.

ಕ್ಷೇತ್ರದಲ್ಲೂ ಸಹ ಅನೇಕ ನಾಯಕರು ಹಾಗೂ ಕಾರ್ಯಕರ್ತರು ಪಕ್ಷ ಬಿಡುತ್ತಿದ್ದು, ಕಾಂಗ್ರೆಸ್ ಪಕ್ಷದ ಹೆಸರಿಲ್ಲದಂತಾಗುತ್ತದೆ. ಜೆಡಿಎಸ್ ಗೆ ಬಂದ ನಾಯಕರನ್ನು ಗೌರವಯುತವಾಗಿ ನಡೆಸಿಕೊಳ್ಳಲಾಗುವುದು. ಅಲ್ಲದೆ, ನಮ್ಮ ಕಾರ್ಯಕರ್ತರು, ಮುಖಂಡರು ಎಲ್ಲ ರೀತಿಯ ಸಹಕಾರ ನೀಡಲಿದ್ದಾರೆ. ಇಂದು ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಲ್ಲೂ ನನ್ನ ಗೆಲುವಿಗೆ ಪಣತೊಟ್ಟಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷವು ಕ್ಷೇತ್ರದ ಕಾರ್ಯಕರ್ತರು ಹಾಗೂ ಮುಖಂಡರನ್ನು ತಬ್ಬಲಿ ಮಾಡಿದ್ದಾರೆ. ಆದರೆ ನಾನು ಅವರನ್ನು ತಬ್ಬಲಿ ಮಾಡಲು ಬಿಡುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ನಾಯಕರು ರಾಜ್ಯದಲ್ಲಿ ಆಳ್ವಿಕೆ ಮಾಡಿದ್ದಾರೆ. ಆಗಲೂ ಮಂಡ್ಯ ಜಿಲ್ಲೆಯನ್ನು ಇಷ್ಟೊಂದು ನಿರ್ಲಕ್ಷ್ಯ ಮಾಡಿರಲಿಲ್ಲ. ಕಾವೇರಿ ನದಿ ನೀರು ಹರಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದರು. ಆದರೆ ಸಿದ್ದರಾಮಯ್ಯ ಅವರು, ಕಾವೇರಿ ನೀರು ಬಿಡದೆ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಸಿದ್ದರಾಮಯ್ಯ ಅವರು ಜಿಲ್ಲೆಗೆ ಬಂದರೆ ರೈತರೇ ತಕ್ಕಪಾಠ ಕಲಿಸಲಿದ್ದಾರೆ ಎಂದು ಕಿಡಿಕಾರಿದ್ದಾರೆ.

See also  ರಸ್ತೆ ಬದಿ ಕ್ಯಾಂಟೀನ್ ಗೆ ನುಗ್ಗಿದ ಕಂಟೇನರ್: ನಾಲ್ವರ ಮೃತ್ಯು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು