News Kannada
Sunday, November 27 2022

ಕರ್ನಾಟಕ

ರಾಜ್ಯಕ್ಕೆ ಮೋದಿಯೇ ಬರಲಿ ಯೋಗಿಯಾದರೂ ಬರಲಿ ಗೆಲ್ಲುವುದು ಕಾಂಗ್ರೆಸ್: ಆರ್.ವಿ. ದೇಶಪಾಂಡೆ - 1 min read

Photo Credit :

ರಾಜ್ಯಕ್ಕೆ ಮೋದಿಯೇ ಬರಲಿ ಯೋಗಿಯಾದರೂ ಬರಲಿ ಗೆಲ್ಲುವುದು ಕಾಂಗ್ರೆಸ್: ಆರ್.ವಿ. ದೇಶಪಾಂಡೆ

ಕಾರವಾರ: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರಕ್ಕೆ ಬಂದರೂ ಬಿಜೆಪಿ ಅಧಿಕಾರಕ್ಕೆ ಬರಲ್ಲ ಎಂದು ಬೃಹತ್ ಮತ್ತು ಮದ್ಯಮ ಕೈಗಾರಿಕೆ ಸಚಿವ ಆರ್.ವಿ ದೇಶಪಾಂಡೆ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಜನ ಇಟ್ಟ ನಂಬಿಕೆಯನ್ನು ನರೇಂದ್ರ ಮೋದಿ ಸುಳ್ಳು ಮಾಡಿದ್ದಾರೆ. ಸುಳ್ಳು ಆಶ್ವಾಸನೆಗಳನ್ನು ನೀಡುವ ಮೂಲಕ ಅಧಿಕಾರ ಹಿಡಿದ ಕೇಂದ್ರ ಸರ್ಕಾರಕ್ಕೆ ಹಾಗೂ ಬಿಜೆಪಿಗೆ ಭವಿಷ್ಯವಿಲ್ಲ ಎಂದರು.

ಚುನಾವಣಾ ಪ್ರಚಾರಕ್ಕಾಗಿ ಯೋಗಿ ಆದಿತ್ಯನಾಥ್ ಹಾಗೂ ನರೇಂದ್ರ ಮೋದಿ ರಾಜ್ಯಕ್ಕೆ ಬರುತ್ತಿದ್ದಾರೆ. ಅವರು ಬಂದರೂ ಯಾವದೇ ಪ್ರಯೋಜನವಿಲ್ಲ. ಬಿಜೆಪಿ ರೈತ ಹಾಗೂ ಕಾರ್ಮಿಕ ವಿರೋಧಿಯಾಗಿದೆ ಎಂದು ಹೇಳಿದರು. ದೇಶದ ಇತರೆ ರಾಜ್ಯಗಳಲ್ಲಿ ಕಾಂಗ್ರೆಸ್ ಬಲಿಷ್ಠಗೊಂಡಿದೆ. ಕರ್ನಾಟಕದಲ್ಲಿಯೂ ಕಾಂಗ್ರೆಸ್ಗೆ ಬಹುಮತ ಸಿಗಲಿದೆ ಎಂದರು. ಕಾಂಗ್ರೆಸ್ ಧರ್ಮದ ಆಧಾರದಲ್ಲಿ ರಾಜಕೀಯ ಮಾಡಿಲ್ಲ.

ಅಭಿವೃದ್ಧಿ ನಿಲುವಿಲ್ಲದ ಬಿಜೆಪಿ ರಾಜಕೀಯದಲ್ಲಿ ಧರ್ಮ ಬೆರೆಸುತ್ತದೆ. ಗೋವಾ, ಮಹಾರಾಷ್ಟ್ರ, ಗುಜರಾತ್ಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುವದರಿಂದ ಕ್ಷೇತ್ರ ಅಭಿವೃದ್ದಿಯಾಗಿಲ್ಲ ಎಂದು ಹೇಳಿದರು.

ನೋಟು ರದ್ದತಿಯಿಂದ ಜನ ಸಾಮಾನ್ಯರು ತೊಂದರೆಗೊಳಗಾಗಿದ್ದಾರೆ. ನಾವು ದುಡಿದ ಹಣ ನಮಗೆ ಸಿಗುತ್ತಿಲ್ಲ. ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ವಿರೋಧಿಗಳ ಮೇಲೆ ಐಟಿ ದಾಳಿ ನಡೆಸುತ್ತಿದೆ ಎಂದು ದೂರಿದರು.

 

See also  ಬಾಣಲೆಯಿಂದ ಬೆಂಕಿಗೆ ಬಿದ್ದ ತಂಬಾಕು ಬೆಳೆಗಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು