News Kannada
Monday, December 05 2022

ಕರ್ನಾಟಕ

ನನಗೂ ಸಿಎಂ ಆಗುವ ಅವಕಾಶ ಸಿಗಬೇಕು: ಡಿಕೆಶಿ

Photo Credit :

ನನಗೂ ಸಿಎಂ ಆಗುವ ಅವಕಾಶ ಸಿಗಬೇಕು: ಡಿಕೆಶಿ

ಸೋಮವಾರಪೇಟೆ: ಒಕ್ಕಲಿಗ ಕೋಟಾದಲ್ಲಿ ದೇವೇಗೌಡರು ಪ್ರಧಾನಮಂತ್ರಿಯಾಗಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ಇನ್ನೂ ಅವರು ಕೇಳುವುದರಲ್ಲಿ ಅರ್ಥವಿಲ್ಲ. ನಾನು ಕೂಡ ಒಕ್ಕಲಿಗನಾಗಿದ್ದು, ಮುಂದಿನ ದಿನಗಳಲ್ಲಿ ನನಗೂ ಕೂಡ ಅವಕಾಶ ಸಿಗಬೇಕು ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

ಸೋಮವಾರಪೇಟೆ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ಬಾರಿ ಜೆಡಿಎಸ್ 20 ಸ್ಥಾನವನ್ನೂ ಪಡೆಯುವುದಿಲ್ಲ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ಈಗಾಗಲೆ 10 ಜೆಡಿಎಸ್ ಶಾಸಕರು ಕಾಂಗ್ರೆಸ್ ಗೆ ಬಂದಿದ್ದಾರೆ. ಇನ್ನು ಹತ್ತು ಶಾಸಕರಿಗೆ ಕಾಂಗ್ರೆಸ್ ನಿಂದ ಟಿಕೆಟ್ ಕೊಡಲು ಸಾಧ್ಯವಾಗಲಿಲ್ಲ. ಈಗಾಗಲೇ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅರಿವಾಗಿರುವುದರಿಂದ ನಮ್ಮ ಪ್ರಣಾಳಿಕೆಗೆ ಬೆಂಬಲ ನೀಡುವ ಪಕ್ಷಗಳಿಗೆ ಬೆಂಬಲ ನೀಡಲಾಗುವುದು ಎಂದು ಹೇಳಿಕೆ ನೀಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಈ ಬಾರಿಯ ಚುನಾವಣೆಯಲ್ಲಿ 132 ಸ್ಥಾನ ಪಡೆಯಲಿದೆ ಎಂದರು.

ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ 40 ಸ್ಥಾನಗಳನ್ನು ಗಳಿಸಿತ್ತು. ಈ ಬಾರಿ ಕೇವಲ 10 ಸ್ಥಾನಗಳನ್ನು ಹೆಚ್ಚುವರಿಯಾಗಿ ಪಡೆಯಬಹುದು. ಅಶಾಂತಿಯಿಂದ ಮಾತ್ರ ಚುನಾವಣೆಯನ್ನು ಗೆಲ್ಲಲು ಸಾಧ್ಯ ಎಂಬುದನ್ನು ಮನಗಂಡಿರುವ ಅಮಿತ್ ಷಾ, ಸಂಸದ ಪ್ರತಾಪ್ ಸಿಂಹ ಅವರಿಗೆ ಧರ್ಮದ ಹೆಸರಿನಲ್ಲಿ ಗಲಭೆಯನ್ನು ನಡೆಸುವಂತೆ ಸೂಚನೆ ನೀಡಿದ್ದಾರೆ. ಬಿಜೆಪಿ ಆಡಳಿತದ ಸಂದರ್ಭ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ಮಂತ್ರಿಗಳು ಜೈಲಿಗೆ ಹೋಗಿ ಬಂದರು. ಈಗ ಅದೇ ಪಕ್ಷದವರು ಅಚ್ಚೇದಿನ್ ಆಯೇಗಾ ಅಂತಾ ಹಗಲು ಕನಸು ಕಾಣುತ್ತಿದ್ದಾರೆ. ಆದರೆ ಈ ದೇಶಕ್ಕೆ ಅಚ್ಚೇದಿನ್ ಇನ್ನೂ ಬಂದಿಲ್ಲ. ಕಪ್ಪುಹಣವನ್ನು ತಂದು ಬಡವರ ಖಾತೆಗೆ ರೂ.15 ಲಕ್ಷ ಹಣವನ್ನು ಹಾಕುತ್ತೇವೆ ಎಂದು ಹೇಳಿದರು. ಬಿಜೆಪಿಯವರು ಪ್ರಚಾರಕ್ಕೆ ಬಂದಾಗ 15 ಲಕ್ಷರೂ.ಗಳನ್ನು ಮತದಾರರು ಕೇಳಬೇಕು ಎಂದು ಹೇಳಿದರು.

See also  ತರೀಕೆರೆ-ಬಿಳಿಕೆರೆ ರಸ್ತೆ ಅಗಲೀಕರಣ: ಸಾರ್ವಜನಿಕರ ವ್ಯಾಪಕ ಆಕ್ಷೇಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು