News Kannada
Sunday, December 04 2022

ಕರ್ನಾಟಕ

ನಿಷೇಧಾಜ್ಞೆ ಜಾರಿ: ಮೇ 12 ರಂದು ಕೊಡಗಿನಲ್ಲಿ ಸಂತೆ, ಜಾತ್ರೆ ನಿಷೇಧ

Photo Credit :

ನಿಷೇಧಾಜ್ಞೆ ಜಾರಿ: ಮೇ 12 ರಂದು ಕೊಡಗಿನಲ್ಲಿ ಸಂತೆ, ಜಾತ್ರೆ ನಿಷೇಧ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಾರದರ್ಶಕ, ಸುಗಮ ಮತ್ತು ಶಾಂತಿಯುತವಾಗಿ ಚುನಾವಣೆಯ ಮತದಾನ ನಡೆಸುವ ಸಂಬಂಧ ಮತ್ತು ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮೇ 10 ರ ಸಂಜೆ 6 ಗಂಟೆಯಿಂದ ಮೇ 13ರ ಸಂಜೆ 6 ಗಂಟೆಯವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಆದೇಶಿಸಿದ್ದಾರೆ.

ಈ ಅವಧಿಯಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿ/ಕಾರ್ಯಕರ್ತರು ಮನೆ ಮನೆಗೆ ತೆರಳಿ ಪಕ್ಷದ ಪರ ಮತಯಾಚನೆ ನಡೆಸುವುದನ್ನು ಹೊರತುಪಡಿಸಿ, ಉಳಿದಂತೆ ಯಾವುದೇ ರಾಜಕೀಯ ಸಭೆ-ಸಮಾರಂಭ ನಡೆಸುವುದು, ಪಟಾಕಿ ಸಿಡಿಸುವುದು, ಮೆರವಣಿಗೆ ಇನ್ನಿತರೆ ಕಾರ್ಯಕ್ರಮ ನಡೆಸುವುದು, ಛಾಯಾಗ್ರಹಣ, ದೂರದರ್ಶನ ಅಥವಾ ಇತರ ರೀತಿಯ ಉಪಕರಣಗಳ ಮೂಲಕ ಯಾವುದೇ ಚುನಾವಣಾ ವಿಷಯವನ್ನು ಸಾರ್ವಜನಿಕರಿಗೆ ಪ್ರದರ್ಶಿಸುವುದನ್ನು ನಿಷೇಧಿಸಿದೆ. ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು, ಐದಕ್ಕಿಂತ ಹೆಚ್ಚಿಗೆ ಜನ ಗುಂಪು ಸೇರುವುದು/ಸಂಚರಿಸುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಎಲ್ಲಾ ಮತಗಟ್ಟೆಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಸ್ಥಳ ನಿರ್ಬಂಧಿತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ, ಧ್ವನಿವರ್ಧಕ ಬಳಕೆ ಮುಂತಾದವುಗಳನ್ನು ನಿಷೇಧಿಸಿದೆ ಹಾಗೂ ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ಪಕ್ಷದ ಪ್ರಚಾರ, ಮತದಾರರ ಓಲೈಕೆ ಮುಂತಾದವುಗಳನ್ನು ಮಾಡುವಂತಿಲ್ಲ.

ಮತದಾನದ ದಿನವಾದ ಮೇ 12 ರಂದು ಜಿಲ್ಲೆಯಾದ್ಯಂತ ಎಲ್ಲಾ ಸಂತೆ-ಜಾತ್ರೆಗಳನ್ನು ನಿಷೇಧಿಸಿದೆ. ಈ ಆದೇಶವು ಸರ್ಕಾರಿ ಕರ್ತವ್ಯದ ನಿಮಿತ್ತ, ಬ್ಯಾಂಕ್/ಎ.ಟಿ.ಎಂ. ಭದ್ರತಾ ಸಿಬ್ಬಂದಿಗಳು ಹಾಗೂ ಮತಗಟ್ಟೆಗಳ ಭದ್ರತಾ ವ್ಯವಸ್ಥೆಗಾಗಿ ನಿಯೋಜಿಸಲ್ಪಟ್ಟ ಅಧಿಕಾರಿ ಮತ್ತು ಸಿಬ್ಬಂದಿಗಳು ಆಯುಧ/ ಬಂದೂಕುಗಳನ್ನು ಹೊಂದಿರುವುದಕ್ಕೆ ಅಥವಾ ಬಳಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

See also  ಎರಡುವರೆ ವರ್ಷದ ಬಾಲಕ ಕೆರೆಗೆ ಬಿದ್ದು ಮೃತ್ಯು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು