News Kannada
Friday, December 02 2022

ಕರ್ನಾಟಕ

ಕಾಂಪೌಂಡ್ ಕುಸಿದು ಗಾಯಗೊಂಡಿದ್ದ ರೈತ ಸಾವು

Photo Credit :

ಕಾಂಪೌಂಡ್ ಕುಸಿದು ಗಾಯಗೊಂಡಿದ್ದ ರೈತ ಸಾವು

ಗುಂಡ್ಲುಪೇಟೆ: ಕಾಪೌಂಡ್ ಕುಸಿದು ಬಿದ್ದ ಪರಿಣಾಮ ಗಾಯಗೊಂಡಿದ್ದ ರೈತರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

ತಾಲೂಕಿನ ಕಗ್ಗಳ ಗ್ರಾಮದ ಸ್ವಾಮಿ(45) ಎಂಬುವರೇ ಸಾವನ್ನಪ್ಪಿದ ದುರ್ದೈವಿ. ಇವರು ಮೇ 10 ರಂದು ಸಂಜೆ ತಮ್ಮ ಜಮೀನಿನಲ್ಲಿ ಕಟ್ಟಿಹಾಕಿದ್ದ ಹಸುವನ್ನು ಮಳೆಯಿಂದ ರಕ್ಷಿಸಲು ಹೋದಾಗ ಸಮೀಪದ ಜಮೀನಿನ ಸುತ್ತಲೂ ಹಾಕಿದ್ದ ಕಲ್ಲಿನ ಕಾಂಪೌಂಡ್ ಗೋಡೆ ಕುಸಿದು ತೀವ್ರ ಗಾಯಗೊಂಡಿದ್ದರು. ಕೂಡಲೇ ಗಾಯಾಳುವನ್ನು ಮೈಸೂರಿನ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಕಂದಾಯಾಧಿಕಾರಿ ನಂಜೇಗೌಡ, ಗ್ರಾಮಲೆಕ್ಕಾಧಿಕಾರಿ ರಂಗಸ್ವಾಮಿ ಭೇಟಿ ನೀಡಿ ಪ್ರಾಕೃತಿಕ ವಿಕೋಪ ನಿಧಿಯಿಂದ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

ಕೇರಳ ಮೂಲದ ವ್ಯಕ್ತಿಯೊಬ್ಬ ಜಮೀನು ಖರೀದಿಸಿ ಯಾವುದೇ ಅನುಮತಿಯಿಲ್ಲದೆ ಅಕ್ರಮವಾಗಿ ಸುತ್ತಲೂ ಕಲ್ಲಿನಿಂದ ಕಾಂಪೌಂಡ್ ನಿರ್ಮಿಸಿಕೊಂಡಿದ್ದರು. ಮೇ.10ರಂದು ಬಿದ್ದ ಮಳೆಗೆ ಒಂದು ಬದಿಯ ಗೋಡೆ ನೆಲಕ್ಕುರುಳಿದ್ದರಿಂದ ಘಟನೆ ನಡೆದಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಕಂದಾಯಾಧಿಕಾರಿಗಳು ಹೇಳಿದ್ದಾರೆ.

See also  ಅ.3ರಿಂದ ಶ್ರೀರಂಗಪಟ್ಟಣದಲ್ಲಿ ಸಡಗರ ಸಂಭ್ರಮದ ದಸರಾ ಆಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು