News Kannada
Tuesday, December 06 2022

ಕರ್ನಾಟಕ

ಮಡಿಕೇರಿಯಲ್ಲಿ ಪತ್ತೆಯಾಗದ ಪುಂಡಾನೆ: ಕಾರ್ಯಾಚರಣೆ ಚುರುಕು

Photo Credit :

ಮಡಿಕೇರಿಯಲ್ಲಿ ಪತ್ತೆಯಾಗದ ಪುಂಡಾನೆ: ಕಾರ್ಯಾಚರಣೆ ಚುರುಕು

ಮಡಿಕೇರಿ: ಸುಂಟಿಕೊಪ್ಪ ಸಮೀಪದ ಮೋದೂರು ಕಾಫಿ ತೋಟದಲ್ಲಿ ಉಪಟಳ ನೀಡುತ್ತಿದ್ದ ಒಂಟಿ ಪುಂಡಾನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ. ಆದರೆ ಸೋಮವಾರ ಪುಂಡಾನೆ ಪತ್ತೆಯಾಗದೆ ಇರುವುದರಿಂದ ಮೇ 15 ರಂದು ಮತ್ತೆ ಕಾರ್ಯಾಚರಣೆ ಮುಂದುವರಿಯಲಿದೆ.

ಇಬ್ರಾಹಿಂ ಎಂಬುವವರ ಮೇಲೆ ಇತ್ತೀಚೆಗೆ ದಾಳಿ ನಡೆಸಿ ಗಾಯಗೊಳಿಸಿದ್ದು ಮಾತ್ರವಲ್ಲದೆ ಸುತ್ತಮುತ್ತಲಿನ ಸ್ಥಳಗಳಲ್ಲಿ ಹಾನಿಯುಂಟು ಮಾಡಿದೆ. ಕಾಡಾನೆಯನ್ನು ಸೆರೆಹಿಡಿಯಲೇ ಬೇಕೆನ್ನುವ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್ ಅವರು ಇಲಾಖೆಗೆ ಪತ್ರ ಬರೆದು ಅನುಮತಿ ಪಡೆದಿದ್ದರು.

ದುಬಾರೆ ಆನೆ ಶಿಬಿರದಿಂದ 4, ಮತ್ತಿಗೋಡಿನಿಂದ 2 ಸಾಕಾನೆಗಳನ್ನು ತಂದು ಸೋಮವಾರ ಬೆಳಗ್ಗೆ 6 ಗಂಟೆಯಿಂದಲೇ ಸಿಬ್ಬಂದಿಗಳು ಕಾರ್ಯಾಚರಣೆಯನ್ನು ಆರಂಭಿಸಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್, ಎಸಿಎಫ್ ಚಿಣ್ಣಪ್ಪ, ಆರ್ ಎಫ್ಓ, ವೈದ್ಯಾಧಿಕಾರಿಗಳಾದ ಡಾ.ಮುಜೀಬ್ ಕಾರ್ಯಾಚರಣೆಯ ಮುಂದಾಳತ್ವದಲ್ಲಿ ಅರಣ್ಯ ಸಿಬ್ಬಂದಿ, ಮಾವುತರು, ಕಾವಾಡಿಗಳು ಸೇರಿದಂತೆ ಸುಮಾರು 60 ಕ್ಕೂ ಹೆಚ್ಚಿನ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ತೊಡಗಿದರು. ತೋಟದೊಳಗೆ ಕಾಡಾನೆಗಳ 2 ಗುಂಪು ಕಂಡು ಬಂದರೂ ಒಂಟಿ ಪುಂಡಾನೆ ಕಾಣ ಸಿಗಲಿಲ್ಲ.

ಮಡಿಕೇರಿ ಹಾಗೂ ಚೆಟ್ಟಳ್ಳಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಇರಬಹುದೆಂದು ಹುಡುಕಾಟ ನಡೆಸಿದರೂ ಪುಂಡಾನೆ ಪತ್ತೆಯಾಗದೆ ಇದ್ದ ಕಾರಣ ಸಂಜೆಯ ನಂತರ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು.
ಮಂಗಳವಾರ ಬೆಳಗ್ಗಿನಿಂದಲೇ ಮತ್ತೆ ಕಾರ್ಯಾಚರಣೆ ನಡೆಸುವುದಾಗಿ ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

See also  ಕಾನೂನು ಉಲ್ಲಂಘಿಸಿದರೆ ಬಳ್ಳಾರಿ ಜೈಲಿಗೆ ಕಳುಹಿಸಬೇಕಾಗುತ್ತದೆ...
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು