News Kannada
Sunday, October 02 2022

ಕರ್ನಾಟಕ

ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ - 1 min read

Photo Credit :

ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ

ಮಡಿಕೇರಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘ ಮಡಿಕೇರಿ ನಗರ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ಎಐಜಿಡಿಎಸ್ ಸಮಿತಿ ನೀಡಿರುವ ವರದಿಯನ್ನು ಸೇರ್ಪಡೆ ಮಾಡಿ ಅದನ್ನು ಜಾರಿಗೊಳಿಸಬೇಕು, ಕನಿಷ್ಠ 8 ಗಂಟೆಗಳ ಕೆಲಸ ಖಾಯಂಗೊಳಿಸಬೇಕು, ದೆಹಲಿ ಮತ್ತು ಮದ್ರಾಸ್ ನ್ಯಾಯಾಲಯದ ತೀರ್ಮಾನದಂತೆ ಜಿಡಿಎಸ್ ನೌಕರರಿಗೆ ಪಿಂಚಣಿ ನೀಡಬೇಕು, ಟಾರ್ಗೆಟ್ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯ ನಿಲ್ಲಿಸಬೇಕು ಎಂದು ಗ್ರಾಮೀಣ ಅಂಚೆ ನೌಕರರು ಪ್ರತಿಭಟನೆ ಸಂದರ್ಭ ಆಗ್ರಹಿಸಿದ್ದಾರೆ.

ನಮ್ಮ ಬೇಡಿಕೆಗಳನ್ನು ಸರಕಾರ ಪರಿಶೀಲಿಸಿ ಈಡೇರಿಸಿದರೆ ಸೇವೆಗೆ ಮರಳುತ್ತೇವೆ, ಇಲ್ಲವಾದಲ್ಲಿ ಮುಷ್ಕರ ಮುಂದುವರಿಸುವುದು ಅನಿವಾರ್ಯವಾಗಲಿದೆ. ಹಲವು ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದರೂ ನಮ್ಮ ಬೇಡಿಕೆಗಳು ಈಡೇರಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಸಂಘದ ಕೊಡಗು ಜಿಲ್ಲಾ ಕಾರ್ಯದರ್ಶಿ ಬಿ.ಎಂ.ಮಂಜುನಾಥ್, ಪ್ರಮುಖರಾದ ಸತೀಶ್ ಕೆ.ಎಚ್, ಸುಶೀಲ, ಶಿವಶಂಕರ್ ಹಾಗೂ ಗ್ರಾಮೀಣ ಅಂಚೆ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

See also  ಆನೆ ದಾಳಿಗೆ ವ್ಯಕ್ತಿ ಬಲಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು