News Kannada
Saturday, October 08 2022

ಕರ್ನಾಟಕ

ಮಳೆ ಹಾನಿಗೆ ತಕ್ಷಣ ಪರಿಹಾರ ಒದಗಿಸಬೇಕು: ಚಕ್ರವರ್ತಿ ಮೋಹನ್ ಸೂಚನೆ - 1 min read

Photo Credit :

ಮಳೆ ಹಾನಿಗೆ ತಕ್ಷಣ ಪರಿಹಾರ ಒದಗಿಸಬೇಕು: ಚಕ್ರವರ್ತಿ ಮೋಹನ್ ಸೂಚನೆ

ಶಿವಮೊಗ್ಗ: ಈ ಬಾರಿ ಉತ್ತಮ ಮುಂಗಾರು ನಿರೀಕ್ಷಿಸಲಾಗಿದ್ದು, ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ತಕ್ಷಣ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ನೋಡಲ್ ಕಾರ್ಯದರ್ಶಿ ಚಕ್ರವರ್ತಿ ಮೋಹನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆ ಹಾನಿ ಪರಿಶೀಲನೆ ಹಾಗೂ ವಿವಿಧ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಮಳೆಯಿಂದಾಗಿ ಪ್ರಾಣ ಹಾನಿ ತಪ್ಪಿಸಲು ಎಲ್ಲಾ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು. ಮುರಿದು ಬಿದ್ದ ವಿದ್ಯುತ್ ಲೈನ್ ನಿಂದ ವಿದ್ಯುತ್ ಹರಿದು ಸಾವಿಗೀಡಾಗುವ ಪ್ರಕರಣ ನಡೆಯಲೇ ಬಾರದು. ಅಂತಹ ನಿರ್ಲಕ್ಷ್ಯದಿಂದ ಪ್ರಾಣ ಹಾನಿ ಉಂಟಾಗುವ ಪ್ರಕರಣಗಳಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಯನ್ನು ಹೊಣೆಗಾರರನ್ನಾಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಗರ ಪ್ರದೇಶಗಳಲ್ಲಿ ಮಳೆ ನೀರು ತುಂಬಿ ಕೃತಕ ನೆರೆ ಉಂಟಾಗುವ ಪ್ರದೇಶಗಳನ್ನು ಗುರುತಿಸಿ ಅಂತಹ ಕಡೆಗಳಲ್ಲಿ ಇನ್ನೂ ಚರಂಡಿ ಸ್ವಚ್ಛತೆ ಕಾರ್ಯ ಮಾಡಬೇಕಯ. ಯಾವುದೇ ತುರ್ತು ಪರಿಸ್ಥಿತಿಯನ್ನು ತಕ್ಷಣ ಎದುರಿಸಲು ಸಿಬ್ಬಂದಿ ಹಾಗೂ ಅಗತ್ಯ ಯಂತ್ರೋಪಕರಣಗಳನ್ನು ಸಜ್ಜುಗೊಳಿಸ ಬೇಕು. ಮೇಲಾಧಿಕಾರಿಗಳ ಅಪ್ಪಣೆ ಇಲ್ಲದೆ ಯಾರೂ ಕೇಂದ್ರಸ್ಥಾನವನ್ನು ಬಿಡಬಾರದು ಎಂದು ಅವರ ಸೂಚನೆ ನೀಡಿದರು.

ಮಳೆ ಹಾನಿ ವರದಿ ಸಲ್ಲಿಸಿ: ಇತ್ತೀಚಿಗೆ ಸಿಡಿಲು ಮಳೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಟ್ಟು 8ಜಾನುವಾರುಗಳು ಸಾವಿಗೀಡಾಗಿವೆ. ಹಲವು ತಾಲ್ಲೂಕುಗಳಲ್ಲಿ ಮನೆಗಳಿಗೆ ಭಾಗಶಃ ಹಾನಿ ಸಂಭವಿಸಿದ್ದು, ಸೊರಬದಲ್ಲಿ 104, ಭದ್ರಾವತಿ 41, ಸಾಗರದಲ್ಲಿ 14 ಮತ್ತು ಶಿಕಾರಿಪುರದಲ್ಲಿ 3 ಮನೆಗಳಿಗೆ ಹಾನಿ ಉಂಟಾಗಿದೆ. ಮನೆ ಹಾನಿ ಪ್ರಕರಣಗಳಲ್ಲಿ ಎರಡು ದಿನಗಳ ಒಳಗಾಗಿ ಪರಿಹಾರವನ್ನು ಒದಗಿಸಬೇಕು. ಮಳೆಯಿಂದ ನಷ್ಟ ಸಂಭವಿಸಿದ ಸ್ಥಳಕ್ಕೆ ತಹಶೀಲ್ದಾರ್ ತಕ್ಷಣ ಭೇಟಿ ನೀಡಿ ಪರಿಹಾರದ ವ್ಯವಸ್ಥೆಯನ್ನು ಕಲ್ಪಿಸಬೇಕು. ಜಿಲ್ಲೆಯಲ್ಲಿ ಮಳೆಯಿಂದ ಇದುವರೆಗೆ ಉಂಟಾಗಿರುವ ಹಾನಿಯ ಬಗ್ಗೆ ಎರಡು ದಿನಗಳ ಒಳಗಾಗಿ ಸಮಗ್ರ ವರದಿಯನ್ನು ಸಲ್ಲಿಸುವಂತೆ ಅವರು ಸೂಚನೆ ನೀಡಿದರು.

ಮಳೆಯಿಂದ ಮರ, ವಿದ್ಯುತ್ ಕಂಬಗಳು ಬಿದ್ದ ತಕ್ಷಣ ಅವುಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮಳೆಗಾಲದ ಸಂದರ್ಭದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳನ್ನು ತಡೆಯಲು ಸೂಕ್ತ ಮುನ್ನಚ್ಚರಿಕೆ ವಹಿಸಬೇಕು. ಎಲ್ಲಾ ಆಸ್ಪತ್ರೆಗಳಲ್ಲಿ ಔಷಧಿಗಳು ಸಾಕಷ್ಟು ಪ್ರಮಾಣದಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.

ಬಿತ್ತನೆ ಬೀಜ ಕೊರತೆ ಇಲ್ಲ: ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಆಗಿರುವುದರಿಂದ ಬಿತ್ತನೆ ಕಾರ್ಯ ಈಗಾಗಲೇ ಆರಂಭವಾಗಿದೆ. 102593 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬಿತ್ತನೆ ಗುರಿ ಹೊಂದಲಾಗಿದ್ದು, ಈಗಾಗಲೇ 1700 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕೈಗೊಳ್ಳಲಾಗಿದೆ. ಬಿತ್ತನೆ ಬೀಜ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇದ್ದು ಎಪಿಎಂಸಿ ಹಾಗೂ ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ವಿತರಿಸಲಾಗುತ್ತಿದೆ.

ಜಿಲ್ಲೆಯಲ್ಲಿ ಒಟ್ಟು 24561 ಕ್ವಿಂಟಾಲ್ ಬಿತ್ತನೆ ಬೀಜ ಬೇಡಿಕೆ ಇದ್ದು ಈಗಾಗಲೆ 1022 ಕ್ವಿಂಟಾಲ್ ವಿತರಣೆ ಮಾಡಲಾಗಿದೆ. ರಸಗೊಬ್ಬರ ಸಹ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿದೆ. ಮಳೆಯಿಂದ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಬೆಳೆ ಹಾನಿ ಸಂಭವಿಸಿಲ್ಲ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣ್ ಕುಮಾರ್ ಅವರು ಮಾಹಿತಿ ನೀಡಿದರು.

See also  ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 4,976

ಇತ್ತೀಚಿನ ಮಳೆಯಿಂದಾಗಿ ಜಿಲ್ಲೆಯಲ್ಲಿ 12ಹೆಕ್ಟೇರ್ ಪ್ರದೇಶದಲ್ಲಿ ಬಾಳೆ ಸೇರಿದಂತೆ ತೋಟಗಾರಿಕಾ ಬೆಳೆಗಳಿಗೆ ಹಾನಿ ಉಂಟಾಗಿದ್ದು, ಬೆಳೆ ಹಾನಿ ಪರಿಶೀಲಿಸಿ ಪರಿಹಾರವನ್ನು ಒದಗಿಸಲಾಗುವುದು ಎಂದು ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಯೋಗೇಶ್ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಎಂ.ಲೋಕೇಶ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಭಿನವ ಖರೆ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಸೇರಿದಂತೆ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು