News Kannada
Monday, November 28 2022

ಕರ್ನಾಟಕ

ವಾಹನ ಡಿಕ್ಕಿ ಹೊಡೆದು ಅಪರೂಪದ ಪುನುಗು ಬೆಕ್ಕು ಸಾವು - 1 min read

Photo Credit :

ವಾಹನ ಡಿಕ್ಕಿ ಹೊಡೆದು ಅಪರೂಪದ ಪುನುಗು ಬೆಕ್ಕು ಸಾವು

ಯಳಂದೂರು: ತಾಲೂಕಿನ ಮೆಳ್ಳಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪರೂಪದ ಪುನುಗು ಬೆಕ್ಕು ಸಾವನ್ನಪ್ಪಿರುವ ಘಟನೆ ನಡೆದಿದೆ.

ನಿಶಾಚಾರಿ ಜೀವಿಯಾಗಿರುವ ಪುನುಗು ಬೆಕ್ಕು ರಾತ್ರಿ ವೇಳೆ ತನ್ನ ಆಹಾರ ಅರಸಿ ಹೋಗುತ್ತದೆ. ಅದರಂತೆ ಅಂಬಳೆ, ಹೊಮ್ಮ, ಕಂದಹಳ್ಳಿ ಸೇರಿದಂತೆ ಸುವರ್ಣಾವತಿ ನದಿಯ ದಡ ವಾಸಸ್ಥಾನವಾಗಿದ್ದು, ಇಲ್ಲಿ ರಾತ್ರಿ ವೇಳೆಯಲ್ಲಿ ವಾಹನಗಳು ಸಂಚರಿಸುವಾಗ ಬಹುಶಃ ಪುನುಗು ಬೆಕ್ಕು ಅಡ್ಡ ಬಂದ ಪರಿಣಾಮ ಡಿಕ್ಕಿಯಾಗಿ ಸಾವನ್ನಪ್ಪಿರಬಹುದು ಎಂದು ಹೇಳಲಾಗಿದೆ.

ರಾಷ್ಟ್ರೀಯ ಹೆದ್ದಾರಿ 209ರಲ್ಲಿ ವಾಹನ ಸಂಚಾರ ಅಧಿಕವಾಗಿರುತ್ತದೆಯಲ್ಲದೆ ವೇಗವಾಗಿ ತೆರಳುವುದರಿಂದ ಒಂದಲ್ಲ ಒಂದು ರೀತಿಯ ಪ್ರಾಣಿಗಳು ವಾಹನಕ್ಕೆ ಸಿಲುಕಿ ಸಾವನ್ನಪ್ಪುತ್ತಿರುವುದು ಮಾಮೂಲಿಯಾಗಿದೆ. ಆದ್ದರಿಂದ ಇಂತಹ ಸ್ಥಳಗಳಲ್ಲಿ ಅರಣ್ಯ ಇಲಾಖೆಯವರು ವಾಹನ ಚಾಲಕರು ನಿಧಾನವಾಗಿ ಚಲಿಸುವಂತೆ ಸೂಚನಾ ಫಲಕಗಳನ್ನು ಅಳವಡಿಬೇಕು. ವೇಗದ ಮಿತಿಯನ್ನು ಹೇರಬೇಕು ಎಂದು ಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ

See also  ಹಾಲು ತರಲು ಹೋದವ ಮಸಣ ಸೇರಿದ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು