ಕಲಬುರಗಿ: ಕರ್ನಾಟದಲ್ಲಿ ಯಾವೂದೇ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ. ಇನ್ನು ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುವುದಕ್ಕೆ ಆಧ್ಯತೆ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಅವರು ಹೇಳಿದರು.
ಯಾವುದೇ ಸರಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ. ಜತೆಗೆ, ಯಾವುದೇ ಸರಕಾರಿ ಶಾಲೆಗಳನ್ನು ವಿಲೀನ ಕೂಡಾ ಮಾಡೋದಿಲ್ಲ ಎಂದರು. ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿಯನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.
ಯುಕೆಜಿ ಆರಂಭಕ್ಕೆ ಚಿಂತನೆ ನಡೆಸಲಾಗಿದೆ. ಅಲ್ಲದೆ, ಸರಕಾರಿ ಶಾಲೆಯಲ್ಲಿ ಇಂಗ್ಲಿಷ್ ಅನ್ನು ಒಂದು ಭಾಷೆಯನ್ನಾಗಿ ಕಲಿಸುವ ಚಿಂತನೆ ಹೊಂದಿದ್ದೇವೆ.