ಕಲಬುರಗಿ: ಅಕ್ಕನ ಮನೆಗೆ ಬೆಂಕಿ ಹಚ್ಚಿ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಬೇಕಾಗಿದ್ದ ಆರೋಪಿ ಮೇಲೆ ಪೊಲೀಸರ ಆತ್ಮರಕ್ಷಣೆಗಾಗಿ ಫೈರಿಂಗ್ ನಡೆಸಿದ್ದಾರೆ.
ಜಿಲ್ಲೆಯ ಹೊರವಲಯದ ಸೇಡಂ ರಸ್ತೆಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದಾಗ, ಆತ್ಮರಕ್ಷಣೆಗಾಗಿ ಆರೋಪಿ ಮಹ್ಮದ್ ಮುಸ್ತಫಾ ಮೇಲೆ ಫೈರಿಂಗ್ ನಡೆಸಿದ್ದಾರೆ.
ಘಟನೆ ಹಿನ್ನೆಲೆ: ಜು.4 ರಂದು ತನ್ನ ಅಕ್ಕನೊಂದಿಗೆ ಜಗಳವಾಡಿ ಆಕೆಯ ಮನೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದ. ೀ ಘಟನೆಯಲ್ಲಿ ಮೂವರು ಮೃತಪಟ್ಟಿದ್ದರು. ಜು. 10 ರಂದು ಹೈದರಾಬಾದ್ನಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಮುಸ್ತಫಾ ಎಸ್ಕೇಪ್ ಆಗಿದ್ದ.
ನಿನ್ನೆ ಪೊಲೀಸರು ಮುಸ್ತಫಾನನ್ನು ಬಂಧಿಸುವ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಇಬ್ಬರು ಎಎಸ್ಐ ಮತ್ತು ಇಬ್ಬರು ಹೆಡ್ ಕಾನ್ಸ್ಟೆಬಲ್ಗೆ ಗಾಯಗಳಾಗಿವೆ. ಆತ್ಮರಕ್ಷಣೆಗಾಗಿ ಪೊಲೀಸರು ಆತನ ಮೇಲೆ ಫೈರಿಂಗ್ ಮಾಡಿದ್ದಾರೆ.
ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.