ಹುಬ್ಬಳ್ಳಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯಿಸಿ ಆಗಸ್ಟ್ 2ರಂದು ಉತ್ತರ ಕರ್ನಾಟಕ ಬಂದ್ ಮಾಡಲಾಗುವುದು ಎಂದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಸೋಮಶೇಖರ ಕೊತಂಬರಿ ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಪಕ್ಷ ಹೆಚ್ಚಿನ ಆದ್ಯತೆ ನೀಡಲಿದೆ. ಉ.ಕರ್ನಾಟಕಕ್ಕೆ ಅನ್ಯಾಯವಾಗಿದೆ ಎನ್ನುವುದು ತಪ್ಪು ಗ್ರಹಿಕೆ ಎಂದರು.
ಬಂದ್ ಕೈಬಿಡುವಂತೆ ಪರಮೇಶ್ವರ ಮನವಿ: ಅಖಂಡ ಕರ್ನಾಟಕದಲ್ಲಿ ಎಲ್ಲ ಭಾಗದವರು ಒಂದೇಯಾಗಿದ್ದು, ಉತ್ತರ ಕರ್ನಾಟಕವನ್ನು ಯಾವತ್ತೂ ನಿರ್ಲಕ್ಷ್ಯ ಮಾಡಿಲ್ಲ. ಹೀಗಾಗಿ ಬಂದ್ ಕೈ ಬಿಡಬೇಕು’ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಮನವಿ ಮಾಡಿದರು.