News Kannada
Monday, November 28 2022

ಕರ್ನಾಟಕ

ಭೀಕರ ಅಪಘಾತ: ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು - 1 min read

Photo Credit :

ಭೀಕರ ಅಪಘಾತ: ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಯಾದಗಿರಿ: ಬೊಲೆರೋ ಪಿಕಪ್ ಹಾಗೂ ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ರಾಜ್ಯ ಹೆದ್ದಾರಿ ಮುಂಡರಗಿ ಬಳಿ ನಡೆದಿದೆ.

ಮೃತರನ್ನು ಶಹಾಪುರ ತಾಲೂಕಿನ ಹುರಸಗುಂಡಗಿ ಗ್ರಾಮದ ಅಯ್ಯಪ್ಪ ಸಂಗಣ್ಣ (21), ಅಂಬ್ರೇಶ ಸಂಗಣ್ಣ (19) ಹಾಗೂ ಯಾದಗಿರಿ ತಾಲೂಕಿನ ರಾಮಸಮುದ್ರ ಗ್ರಾಮದ ರವಿಚಂದ್ರ (21) ಎಂದು ಗುರುತಿಸಲಾಗಿದೆ.

ಗಾರೆ ಕೆಲಸಕ್ಕಾಗಿ ಮೂವರು ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಬೈಕ್ ಹಾಗೂ ಬೆಲೆರೋ ನಡುವೆ ಅಪಘಾತ ಸಂಭವಿಸಿದೆ. ಪರಾರಿಯಾಗಲು ಯತ್ನಿಸಿದ ಬೊಲೆರೋ ಚಾಲಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.  ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ವೆಂಕಟರಡ್ಡಿ ಮುದ್ನಾಳ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

 

See also  ಸಬ್‌ ಇನ್ಸ್‌ಪೆಕ್ಟರ್‌ ನ್ನೇ ದರೋಡೆ ಮಾಡಲು ಯತ್ನ ; ಹೆಲ್ಮೆಟ್‌ ನೋಡಿ ಪರಾರಿ ; ಮೂವರ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು