ಚಾಮರಾಜನಗರ: ಸರ್ಕಾರಿ ಶಾಲೆಯ ಬಿಸಿಯೂಟದ ಅಡುಗೆ ಕೋಣೆಯಲ್ಲಿ ಕುಕ್ಕರ್ ಸಿಡಿದು ವಿದ್ಯಾರ್ಥಿನಿಯೊಬ್ಬಳು ಗಾಯಗೊಂಡ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಹನೂರು ತಾಲೂಕಿನ ಗುಂಡಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಬೆಳಗ್ಗೆ ಈ ಘಟನೆ ನಡೆದಿದೆ. ಗಾಯಗೊಂಡ ವಿದ್ಯಾರ್ಥನಿಯನ್ನು ರಾಜೇಶ್ವರಿ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ಹಾಲು ಕುಡಿಯಲೆಂದು ಅಡುಗೆ ಕೋಣೆಗೆ ಹೋದಾಗ ಈ ದುರ್ಘಟನೆ ನಡೆದಿದೆ.
ಗಾಯಗೊಂಡ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.