ಹುಬ್ಬಳ್ಳಿ: ಭಾರತದ ಯುವಕರು ಐಸಿಸ್ ಸೇರಲು ನಿರುದ್ಯೋಗ ಕಾರಣವೆಂದು ಹೇಳಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಒಬ್ಬ ಪೆದ್ದ ಮತ್ತು ಹುಚ್ಚ ಎಂದು ಸಂಸದ ಪ್ರಹ್ಲಾದ್ ಜೋಶಿ ಟೀಕಿಸಿದರು.
ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ವಿಶ್ವಮಟ್ಟದಲ್ಲಿ ಪಾಕಿಸ್ತಾನದ ಭಯೋತ್ಪಾದನೆಯನ್ನು ತಿಳಿಸಲು ಭಾರತ ಪ್ರಯತ್ನಿಸುತ್ತಿದೆ. ಆದರೆ ರಾಹುಲ್ ಗಾಂಧಿ ಆ ದೇಶಕ್ಕೆ ಅನುಕೂಲವಾಗುವ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಮತ್ತು ಆರ್ ಎಸ್ ಎಸ್ ಉಗ್ರವಾದ ಪ್ರತಿಪಾದಿಸುತ್ತಿದೆ ಎಂದು ಹೇಳಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ತನ್ನ ಹುಚ್ಚು ನಾಯಕನನ್ನು ಅನುಸರಿಸುತ್ತಿದ್ದಾರೆ ಎಂದರು.