ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿದ ಕಾರ್ ಡಿವೈಡರ್ ಗೆ ಬಡಿದು, ಇಬ್ಬರು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಘಟನೆ ಇಂದು ಬೆಳಗ್ಗೆ ಮಂಜೇಶ್ವರದ ಹೊಸಂಗಡಿ ಪೇಟೆಯಲ್ಲಿ ನಡೆದಿದೆ.
ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಹಾವೇರಿ ಸವಣೂರಿನ ಮಲ್ಲೇಶ ಮತ್ತು ಪರಶುರಾಮ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಚಾಲಕ ಚಾಲಕ ಕೋಪಟಿ(56),ಪ್ರಯಾಣಿಕರಾದ ಸಾನುಬಾಯಿ(75), ಸರಸ್ವತಿ(20), ಪೂಜಾ(19) ಗಾಯಗೊಂಡಿದ್ದಾರೆ.
ಮಹಾರಾಷ್ಟ್ರದಿಂದ ಕಾಞಂಗಾಡ್ ಭಾಗಕ್ಕೆ ತೆರಳುತ್ತಿದ್ದ ಕಾರು ಹೊಸಂಗಡಿ ಜಂಕ್ಷನ್ನಲ್ಲಿ ಡಿವೈಡರ್ ಗೆ ಬಡಿದ ಬಳಿಕ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.