News Kannada
Sunday, September 25 2022

ಕರ್ನಾಟಕ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊಳೆರೋಗಕ್ಕೆ 16,955 ಹೆಕ್ಟೇರ್ ಬೆಳೆ ಹಾನಿ - 1 min read

Photo Credit :

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊಳೆರೋಗಕ್ಕೆ 16,955 ಹೆಕ್ಟೇರ್ ಬೆಳೆ ಹಾನಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರಸಕ್ತ ಸಾಲಿನ ಮುಂಗಾರಿನಲ್ಲಿ ಅತಿವೃಷ್ಠಿ, ಪ್ರವಾಹ ಹಾಗೂ ಕೊಳೆ ರೋಗಕ್ಕೆ ಸುಮಾರು 16,955 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ.

ಪ್ರಸಕ್ತ ಮುಂಗಾರಿನಲ್ಲಿ ಉತ್ತರ ಕನ್ನಡ ಜಿಲ್ಲೆ ನಿರಂತರವಾಗಿ ಸುರಿದ ಭಾರೀ ಮಳೆಗೆ ಅಡಿಕೆ ಮತ್ತು ಮೆಣಸು ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದ್ದು ಜಿಲ್ಲಾದ್ಯಂತ 16,955 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿರುವ ಬಗ್ಗೆ ಈಗಾಗಲೇ ತೋಟಗಾರಿಕೆ ನಿರ್ದೇಶನಾಲಯಕ್ಕೆ ವರದಿ ಸಲ್ಲಿಸಿರುವುದಗಿ ತೋಟಗಾರಿಕೆ ಉಪ ನಿರ್ದೇಶಕ ಶಶಿಕಾಂತ್ ಕೋಟಿಮನಿ ತಿಳಿಸಿದ್ದಾರೆ.

ಅತಿ ಹೆಚ್ಚು ಶಿರಸಿ ತಾಲೂಕಿನಲ್ಲಿ 6815.76 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಯಾಗಿದ್ದರೆ ಸಿದ್ದಾಪುರ 4458.97 ಹೆಕ್ಟೇರ್, ಯಲ್ಲಾಪುರದಲ್ಲಿ 3223 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳು ಹಾನಿಯಾಗಿವೆ. ಕೊಳೆರೋಗ ನಿಯಂತ್ರಣಕ್ಕೆ ಸಂಬಂಧಿಸಿದಂತೆ ತೋಟಗಾರಿಕಾ ಬೆಳೆಗಾರರು ಔಷಧಗಳನ್ನು ಖರೀದಿಸಲು ಕೀಟರೋಗ ನಿರ್ವಹಣೆ ಯೋಜನೆಯಡಿ ಶೆ.75ರಷ್ಟು ಸಹಾಯಧನ ನೀಡಲಾಗುತ್ತಿದೆ. ಮೈಲುತುತ್ತ, ಸುಣ್ಣ ಖರೀದಿಸಿದ ರೈತರಿಗೆ ಈಗಾಗಲೇ ಸಹಾಯಧನ ವಿತರಿಸಲಾಗಿದೆ ಎಂದರು.

ಅಲ್ಲದೆ, ಹಾರ್ಟಿಕ್ಲಿನಿಕ್ ಮೂಲಕ ತೋಟಗಾರಿಕೆ ಬೆಳೆಗಾರರಿಗೆ ವಿಷಯ ತಜ್ಞರಿಂದ ಸೂಕ್ತ ಮಾಹಿತಿ ಸಲಹೆಗಳನ್ನು ನೀಡಲಾಗುತ್ತಿದೆ. ತೋಟಗಾರಿಕೆ ಇಲಾಖೆ ಅಧಿಕಾರಿ ಸಿಬ್ಬಂದಿಗಳು ರೈತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಕಾಲ ಕಾಲಕ್ಕೆ ಸಮಪ್ರಮಾಣದಲ್ಲಿ ರಸಗೊಬ್ಬರ ಹಾಗೂ ಔಷಣ ಸಿಂಪಡಣೆ ಬಗ್ಗೆ ಸೂಕ್ತ ಸಲಹೆಗಳನ್ನು ನೀಡುತ್ತಿದ್ದಾರೆ ಎಂದರು.

ಅತಿವೃಷ್ಠಿ ತೀವ್ರ ಪ್ರಮಾಣದಲ್ಲಿ ಆಗಿರುವ ಕೆಲವು ಭಾಗಗಳಲ್ಲಿ ಚಂಡೆಕೊಳೆ ರೋಗ ಕಂಡುಬರುತ್ತಿದ್ದು ಅಡಿಕೆ ಬೆಳೆಗಾರರು ತಕ್ಷಣ ಅಂತರವ್ಯಾಪಿ ಶಿಲೀಂಧ್ರ ನಾಶಕ ಔಷಧ ಸಿಂಪಡಿಸಬೇಕು. ಈ ಸಂಬಂಧ ಈಗಾಗಲೇ ಇಲಾಖೆಯಿಂದ ಸೂಕ್ತ ಪ್ರಚಾರ ಕೈಗೊಳ್ಳಲಾಗಿದೆ. ಚಂಡೆ ಕೊಳೆರೋಗ ಬಂದರೆ ರೈತರಿಗೆ ತೀವ್ರತರದ ನಷ್ಟ ಸಂಭವಿಸುವುದರಿಂದ ರೈತರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಪ್ರಸಕ್ತ ಸಾಲಿನಲ್ಲಿ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ 36,482 ರೈತರು ನೋಂದಣಿ ಮಾಡಿರುವುದಾಗಿ ಅವರು ತಿಳಿಸಿದ್ದಾರೆ.

See also  ನಕಲು ಮಾಡಿ ಪರೀಕ್ಷೆ ‌ಬರೆಯಲು ಅವಕಾಶ ಕಳೆದುಕೊಂಡ 300 ಹೆಚ್ಚು ಡಿಪ್ಲೊಮಾ ವಿದ್ಯಾರ್ಥಿಗಳು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು