News Kannada
Thursday, October 06 2022

ಕರ್ನಾಟಕ

ರಾಮನಗರದಲ್ಲಿ ಸರಣಿ ಅಪಘಾತ: ಇಬ್ಬರು ಸಾವು - 1 min read

Photo Credit :

ರಾಮನಗರದಲ್ಲಿ ಸರಣಿ ಅಪಘಾತ: ಇಬ್ಬರು ಸಾವು

ರಾಮನಗರ: ಚಲಿಸುತ್ತಿದ್ದ ಕಾರಿಗೆ ಖಾಸಗಿ ಬಸ್‍ವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರು ರಸ್ತೆ ವಿಭಜಕ ದಾಟಿ ಮತ್ತೊಂದು ಕಾರಿಗೆ ಅಪ್ಪಳಿಸಿ ಸರಣಿ ಅಪಘಾತ ಸಂಭವಿಸಿದ್ದು, ಇದರಿಂದ ಇಬ್ಬರು ಸಾವನ್ನಪ್ಪಿ, ಮೂರು ಜನ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕೆಂಪನಹಳ್ಳಿ ಗೇಟ್ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರು ಮಂಡ್ಯ ನಗರದ ಆನೆಕೆರೆ ಬೀದಿಯ ವಾಸಿ ಪವನ್(27), ಮತ್ತು ರಾಜೇಂದ್ರ ಉರುಫ್ ರಾಜಿ (28) ಎಂದು ಗುರುತಿಸಲಾಗಿದೆ. ಇವರ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದ ದಿವ್ಯಾ ಎಂಬುವರು ತೀವ್ರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ, ಮತ್ತೊಂದು ಕಾರಿನಲ್ಲಿದ್ದ ಬಿಡದಿಯ ಕಂದಾಯ ನಿರೀಕ್ಷಕ ಪ್ರಕಾಶ್ ಮತ್ತು ಚಾಲಕ ಶಂಕರ್ ಎಂಬುವರೂ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ಪವನ್, ರಾಜೇಂದ್ರ ಹಾಗೂ ಗಾಯಾಳು ದಿವ್ಯಾ ಅವರು ಕಾರಿನಲ್ಲಿ ಮಂಡ್ಯದಿಂದ ಬೆಂಗಳೂರಿನತ್ತ ತೆರಳುತ್ತಿದ್ದರು. ಬಿಡದಿ ಸಮೀಪದ ಕೆಂಪನಹಳ್ಳಿ ಗೇಟ್ ಬಳಿ ಉದಯರಂಗ ಖಾಸಗಿ ಬಸ್ ಹಿಂಬದಿಯಿಂದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ.

ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್ ದಾಟಿ ಬೆಂಗಳೂರಿನಿಂದ ರಾಮನಗರದ ಕಡೆಗೆ ಚಲಿಸುತ್ತಿದ್ದ ಸ್ವಿಫ್ಟ್ ಕಾರಿಗೆ ಅಪ್ಪಳಿಸಿದ ರಭಸಕ್ಕೆ ಪವನ್ ಮತ್ತು ರಾಜೇಂದ್ರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ದಿವ್ಯಾ ಅವರನ್ನು ರಾಜರಾಜೇಶ್ವರಿ ಆಸ್ಪತ್ರೆ ಹಾಗೂ ಪ್ರಕಾಶ್ , ಶಂಕರ್ ಅವರನ್ನು ಬೆಂಗಳೂರಿನ ನಿಮ್ಹಾನ್ಸ್‍ಗೆ ದಾಖಲು ಮಾಡಲಾಗಿದೆ.

ಈ ಘಟನೆಯಿಂದಾಗಿ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಕೆಲಕಾಲ ಅಸ್ತವ್ಯಸ್ಥಗೊಂಡಿತ್ತು. ಬಿಡದಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಅಪಘಾತಕ್ಕೀಡಾಗಿದ್ದ ಕಾರುಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಅಪಘಾತಕ್ಕೆ ಕಾರಣವಾಗಿ ಪರಾರಿಯಾಗುತ್ತಿದ್ದ ಖಾಸಗಿ ಬಸ್ ಅನ್ನು ಚಾಲಕನ ಸಮೇತ ಪೊಲೀಸರು ಬಿಡದಿಯ ಹೊರ ವಲಯದಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ. ಅಪಘಾತದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಾಮನಗರ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಮೃತರ ಸಂಬಂಧಿಕರು ಮತ್ತು ಸ್ನೇಹಿತದರು ಆಸ್ಪತ್ರೆ ಆವರಣದಲ್ಲಿ ಜಮಾಯಿಸಿದ್ದರು. ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿತ್ತು.

ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಅಪ್ರಾಪ್ತೆಯ ಮದುವೆ ತಡೆದ ಅಧಿಕಾರಿಗಳು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು