News Kannada
Friday, October 07 2022

ಕರ್ನಾಟಕ

ನಗರಸಭೆ ಪೌರಾಯುಕ್ತರ ಕಚೇರಿಗೆ ಮುತ್ತಿಗೆ: ಎಸ್‍ಡಿಪಿಐ ಎಚ್ಚರಿಕೆ - 1 min read

Photo Credit :

ನಗರಸಭೆ ಪೌರಾಯುಕ್ತರ ಕಚೇರಿಗೆ ಮುತ್ತಿಗೆ: ಎಸ್‍ಡಿಪಿಐ ಎಚ್ಚರಿಕೆ

ಮಡಿಕೇರಿ: ನಗರದ ಮಹದೇವಪೇಟೆಯಲ್ಲಿ ರಸ್ತೆ ನಿರ್ಮಾಣದ ಸಂದರ್ಭ ಕಳಪೆ ಕಾಮಗಾರಿ ನಿರ್ವಹಿಸಿದ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ಹಾಗೂ ನಗರಸಭೆಯ ಬಿಲ್ ಸಂಗ್ರಹದಲ್ಲಿ 2 ಕೋಟಿ ರೂ.ಗಳಿಗೂ ಅಧಿಕ ಮೊತ್ತ ವಂಚಿಸಿದ ಪ್ರಕರಣದ ಕುರಿತು ಸಿಐಡಿ ತನಿಖೆ ನಡೆಸಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ನಗರ ಘಟಕ ಒತ್ತಾಯಿಸಿದೆ.

ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಎಸ್‍ಡಿಪಿಐ ನಗರ ಪ್ರಧಾನ ಕಾರ್ಯದರ್ಶಿ ರಿಯಾಜ್, ಏಳು ದಿನಗಳ ಒಳಗಾಗಿ ಈ ಎರಡು ಪ್ರಕರಣಗಳ ಬಗ್ಗೆ ನಗರಸಭೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಪೌರಾಯುಕ್ತರ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು.

ಎರಡು ವರ್ಷಗಳ ಹಿಂದೆ ಮಹದೇವಪೇಟೆ ರಸ್ತೆಯನ್ನು ಕಾಂಕ್ರಿಟೀಕರಣ ಮಾಡಲಾಗಿದ್ದು, ನಿರ್ಮಾಣವಾದ ಕೆಲವೇ ತಿಂಗಳುಗಳಲ್ಲಿ ರಸ್ತೆ ಗುಂಡಿ ಬಿದ್ದಿದೆ. ಈ ಬಗ್ಗೆ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ಸಂದರ್ಭ ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ವಹಿಸುವಂತೆ ನಗರಸಭೆಯ ನಿರ್ಣಯ ಕೈಗೊಳ್ಳಲಾಗಿದೆ. ಆದರೆ ನಿರ್ಣಯವಾಗಿ ಒಂದು ವರ್ಷ ಕಳೆದರೂ ಈವರೆಗೆ ಪ್ರಕರಣದ ತನಿಖೆಯನ್ನು ಯಾವುದೇ ಸಂಸ್ಥೆಗೂ ವಹಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

See also  ಲಿಬರೇಷನ್ ಫ್ರಂಟ್ ಅಧ್ಯಕ್ಷ ಯಾಸಿನ್ ಮಲಿಕ್ ಪೊಲೀಸ್ ವಶಕ್ಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು