News Kannada
Friday, October 07 2022

ಕರ್ನಾಟಕ

ರಾಜಕೀಯ ವೈಷ್ಯಮ್ಯ: ಗುಂಡೇಟಿಗೆ ಬಿಜೆಪಿ ಕಾರ್ಯದರ್ಶಿಯ ಬಲಿ - 1 min read

Photo Credit :

ರಾಜಕೀಯ ವೈಷ್ಯಮ್ಯ: ಗುಂಡೇಟಿಗೆ ಬಿಜೆಪಿ ಕಾರ್ಯದರ್ಶಿಯ ಬಲಿ

ಮಡಿಕೇರಿ: ಗುಂಡಿನ ದಾಳಿಗೆ ಬಿಜೆಪಿ ಕಾರ್ಯದರ್ಶಿ ವ್ಯಕ್ತಿಯೊಬ್ಬರು ಮೃತ ಪಟ್ಟಿರುವ ಘಟನೆ ಮಡಿಕೇರಿ ತಾಲ್ಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಮರಗೋಡು ಬಿಜೆಪಿ ಸ್ಥಾನೀಯ ಸಮಿತಿ ಕಾರ್ಯದರ್ಶಿ ಕಾನಡ್ಕ ತಿಲಕರಾಜ್ (40) ಮೃತ ದುರ್ದೈವಿ. ಆರೋಪಿ ಜೆಡಿಎಸ್ ಬೆಂಬಲಿತ ಗ್ರಾ.ಪಂ ಸದಸ್ಯ ಮುಂಡೋಡಿ ನಂದಾ ನಾಣಯ್ಯ ತಲೆ ಮರೆಸಿಕೊಂಡಿದ್ದಾನೆ.

ಮೃತರು ಪತ್ನಿ, ಒಬ್ಬ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಸೋಮವಾರ ಸಂಜೆ 6.30 ಗಂಟೆ ಸುಮಾರಿಗೆ ಮರಗೋಡು ಜಂಕ್ಷನ್ ಬಳಿ ತಿಲಕ್ ರಾಜ್ ಹಾಗೂ ನಂದ ನಾಣಯ್ಯ ನಡುವೆ ವಾಗ್ವಾದ ನಡೆದು ನಂದಾ ನಾಣಯ್ಯ ಹಾರಿಸಿದ ಗುಂಡಿಗೆ ತಿಲಕರಾಜ್ ಬಲಿಯಾಗಿರುವುದಾಗಿ ತಿಳಿದು ಬಂದಿದೆ.

ಗಾಯಾಳು ತಿಲಕರಾಜ್ ಅವರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಕರೆ ತರುವ ಸಂದರ್ಭ ಮಾರ್ಗ ಮಧ್ಯೆ ಮೃತ ಪಟ್ಟಿದ್ದಾರೆ.

ರಾಜಕೀಯ ವೈಷಮ್ಯವೇ ಕೃತ್ಯಕ್ಕೆ ಕಾರಣವೆಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಡಿವೈಎಸ್ ಪಿ ಸುಂದರ್ ರಾಜ್, ಗ್ರಾಮಾಂತರ ಠಾಣಾಧಿಕಾರಿ ಚೇತನ್ ಹಾಗೂ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ನಂದಾ ನಾಣಯ್ಯನ ಪತ್ತೆಗಾಗಿ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ.

::: ಶಾಸಕರ ಭೇಟಿ :::

ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ ನಿಷ್ಠಾವಂತ ಕಾರ್ಯಕರ್ತನನ್ನು ಕಳೆದುಕೊಂಡಿರುವುದಾಗಿ ಬೇಸರ ವ್ಯಕ್ತಪಡಿಸಿದರು. ರಾಜಕೀಯ ವೈಷಮ್ಯದಿಂದ ಹತ್ಯೆ ನಡೆದಿರುವುದು ಅತ್ಯಂತ ಖಂಡನೀಯ ಮತ್ತು ಆತಂಕಕಾರಿ ಬೆಳವಣಿಗೆಯಾಗಿದ್ದು, ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು. ಜಿ.ಪಂ ಅಧ್ಯಕ್ಷ ಬಿ.ಎ.ಹರೀಶ್ ಈ ಸಂದರ್ಭ ಹಾಜರಿದ್ದರು.

See also  ಕೇರಳ ಚುನಾವಣೆ : ಕೊಡಗು ಗಡಿಯಲ್ಲಿ ಮದ್ಯ ಮಾರಾಟ ನಿಷೇಧ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು