News Kannada
Sunday, October 02 2022

ಕರ್ನಾಟಕ

ನಿರಾಶ್ರಿತರಿಗೆ ಸದ್ಯದಲ್ಲೇ ಮನೆ ನಿರ್ಮಾಣ ಕಾರ್ಯ ಆರಂಭ: ವಿಶೇಷ ಹೆಚ್ಚುವರಿ ಜಿಲ್ಲಾಧಿಕಾರಿ - 1 min read

Photo Credit :

ನಿರಾಶ್ರಿತರಿಗೆ ಸದ್ಯದಲ್ಲೇ ಮನೆ ನಿರ್ಮಾಣ ಕಾರ್ಯ ಆರಂಭ: ವಿಶೇಷ ಹೆಚ್ಚುವರಿ ಜಿಲ್ಲಾಧಿಕಾರಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಉಂಟಾದ ಪ್ರಕೃತಿ ವಿಕೋಪದಿಂದಾಗಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ವಸತಿ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ಜಾಗ ಗುರುತಿಸಿದ್ದು, ಸಮತಟ್ಟು ಮಾಡುವ ಕಾರ್ಯ ಪೂರ್ಣಗೊಂಡು, ಬಡಾವಣೆ ನಿರ್ಮಾಣ ಸಂಬಂಧ ಅನುಮೋದನೆ ಪಡೆಯುವ ಕಾರ್ಯ ಪ್ರಗತಿಯಲ್ಲಿದೆ.

ಆ ನಿಟ್ಟಿನಲ್ಲಿ ಬಡಾವಣೆಯ ನೀಲ ನಕಾಶೆ ತಯಾರಾಗಿದ್ದು, ಒಳಚರಂಡಿ ವ್ಯವಸ್ಥೆ, ವಿದ್ಯುತ್ ಮಾರ್ಗ, ಕುಡಿಯುವ ನೀರು ಸಂಪರ್ಕ ಕಲ್ಪಿಸುವ ಬಗ್ಗೆ ವಿವಿಧ ಇಲಾಖೆಯ ಅಧಿಕಾರಿಗಳ ತಂಡವು ಶುಕ್ರವಾರ ಪರಿಶೀಲನೆ ಮಾಡಿದರು ಎಂದು ವಿಶೇಷ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಅವರು ತಿಳಿಸಿದ್ದಾರೆ.

ಬಡಾವಣೆ ನಿರ್ಮಾಣ ಸಂಬಂಧ ಇನ್ನೂ ಒಂದು ವಾರದಲ್ಲಿ ಅನುಮೋದನೆ ದೊರೆಯಲಿದ್ದು, ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅನುಮೋದನೆ ದೊರತೆ ನಂತರ ನಿರಾಶ್ರಿತರಿಗೆ ಒಪ್ಪಿಗೆಯಾಗುವ ಮನೆ ನಿರ್ಮಿಸುವ ಕಾರ್ಯ ಶುರುವಾಗಲಿದೆ ಎಂದು ಜಗದೀಶ್ ಅವರು ಮಾಹಿತಿ ನೀಡಿದರು.

ಹಾಗೆಯೇ ಪ್ರಕೃತಿ ವಿಕೋಪದಿಂದಾಗಿ ಅಪಾರ ಪ್ರಮಾಣದಲ್ಲಿ ಕೃಷಿ, ತೋಟಗಾರಿಕೆ, ಕಾಫಿ, ಕರಿಮೆಣಸು, ಏಲಕ್ಕಿ, ಬಾಳೆ ಹೀಗೆ ವಿವಿಧ ಬೆಳೆಗಳು ನಷ್ಟ ಉಂಟಾಗಿದ್ದು, ಬೆಳೆ ನಷ್ಟ ಪರಿಹಾರಕ್ಕೆ 100 ಕೋಟಿ ರೂ ಹೆಚ್ಚು ಹಣ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.

See also  ಮಳೆಗಾಗಿ ತಲಕಾವೇರಿಯಲ್ಲಿ ವಿಶೇಷ ಪೂಜೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು