News Kannada
Wednesday, October 05 2022

ಕರ್ನಾಟಕ

ಪಟ್ಟಣ ಪಂಚಾಯ್ತಿ ಚುನಾವಣೆ: ಡಿಸಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ - 1 min read

Photo Credit :

ಪಟ್ಟಣ ಪಂಚಾಯ್ತಿ ಚುನಾವಣೆ: ಡಿಸಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

ಮಡಿಕೇರಿ: ಜಿಲ್ಲೆಯ ಮೂರು ಪಟ್ಟಣ ಪಂಚಾಯ್ತಿಗಳಿಗೆ ನಡೆಯುವ ಚುನಾವಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಚುನಾವಣಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತೆ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿ, ಜಿಲ್ಲೆಯ ವೀರಾಜಪೇಟೆ, ಸೋಮವಾರಪೇಟೆ ಮತ್ತು ಕುಶಾಲನಗರ ಪಟ್ಟಣ ಪಂಚಾಯ್ತಿಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣೆಗೆ ಸಂಬಂಧಿಸಿದ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳುವಂತೆ ಚುನಾವಣಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸುವುದು, ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಂಸಿಸಿ ತಂಡಗಳು ಮೇಲ್ವಿಚಾರಣೆ ಮಾಡುವುದು, ಸಿಸಿ ಟಿ.ವಿ. ಅಳವಡಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಮತದಾರರ ಪಟ್ಟಿ ಸರಿ ಇರುವ ಬಗ್ಗೆ ಮತ್ತೊಮ್ಮೆ ಪರಿಶೀಲಿಸಿ, ಅಂತಿಮ ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ನೋಂದಣಿಯಾಗಿರುವ ಬಗ್ಗೆ ಸಂಬಂಧಪಟ್ಟ ವಾರ್ಡ್‍ನ ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ನೋಂದಾವಣೆಯಾಗಿರುವ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ತಾಲೂಕು ಕಚೇರಿಗಳಲ್ಲಿ ಮತ್ತು ಚುನಾವಣಾಧಿಕಾರಿಗಳ ಕಚೇರಿಯಲ್ಲಿ, ಪಟ್ಟಣ ಪಂಚಾಯ್ತಿ ಕಚೇರಿಗಳಲ್ಲಿ
`ಮತದಾರರ ನೆರವು ಕೇಂದ್ರ’ ತೆರೆಯಬೇಕು ಹಾಗೂ ಈ ಕೇಂದ್ರದಲ್ಲಿ ವಾರ್ಡ್‍ವಾರು ಮತದಾರರ ಪಟ್ಟಿಯನ್ನು ಇಡಬೇಕು ಎಂದು ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎಲ್.ಪ್ರವೀಣ್ ಕುಮಾರ್ ಮಾತನಾಡಿ, ಮತಪತ್ರದಲ್ಲಿ ಅಭ್ಯರ್ಥಿಗಳ ಭಾವಚಿತ್ರ ಮುದ್ರಣ ಮಾಡಲು ಮತ್ತು ಮತಪತ್ರದಲ್ಲಿ `ನೋಟಾ’ವನ್ನು ಮುದ್ರಿಸಲು ರಾಜ್ಯ ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸಬೇಕು ಹಾಗೂ ಪಟ್ಟಣ ಪಂಚಾಯ್ತಿವಾರು ನೇಮಕ ಮಾಡಿರುವ ನೋಡಲ್ ಅಧಿಕಾರಿಗಳು ಎಲ್ಲಾ ಚುನಾವಣಾ ಕರ್ತವ್ಯಗಳ ಸಂಪೂರ್ಣ ಮೇಲುಸ್ತುವಾರಿ ಮಾಡಬೇಕು ತಿಳಿಸಿದರು.

ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರು ಹಲವು ಸಲಹೆಗಳನ್ನು ನೀಡಿದರು. ವಿರಾಜಪೇಟೆ ತಹಶೀಲ್ದಾರ ಗೋವಿಂದರಾಜು, ಸೋಮವಾರಪೇಟೆ ತಹಶೀಲ್ದಾರ್ ಮಹೇಶ್, ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಪ್ರಮೋದ್ ಸಿ.ಎಂ., ವೀರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಚಾರ್ಲ್ ಡಿಸೋಜ, ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ಶಿವರಾಜು, ಹೆಚ್.ಪಿ.ಗಣೇಶ್, ವೀರಾಜಪೇಟೆ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಶ್ರೀಧರ, ಚುನಾವಣಾ ನೋಡಲ್ ಅಧಿಕಾರಿಗಳು ಇತರರು ಇದ್ದರು.

See also  ಪ್ರಯಾಣಿಕರಿಗೆ ತಂಗುದಾಣ, ಶೌಚಾಲಯ ನಿರ್ಮಿಸಿ : ಜೋಯಪ್ಪ ಆಗ್ರಹ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು