News Kannada
Sunday, September 25 2022

ಕರ್ನಾಟಕ

ಕೊಡಗಿನ ಪಟ್ಟಣ ಪಂಚಾಯಿತಿಗಳಿಗೆ ಅ.28ರಂದು ಚುನಾವಣೆ: ಜಿಲ್ಲಾಧಿಕಾರಿ - 1 min read

Photo Credit :

ಕೊಡಗಿನ ಪಟ್ಟಣ ಪಂಚಾಯಿತಿಗಳಿಗೆ ಅ.28ರಂದು ಚುನಾವಣೆ: ಜಿಲ್ಲಾಧಿಕಾರಿ

ಮಡಿಕೇರಿ: ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಮಧ್ಯಂತರದಲ್ಲಿ ಸ್ಥಗಿತಗೊಳಿಸಲಾಗಿದ್ದ, ಜಿಲ್ಲೆಯ ವೀರಾಜಪೇಟೆ, ಕುಶಾಲನಗರ ಮತ್ತು ಸೋಮವಾರಪೇಟೆ ಪಟ್ಟಣ ಪಂಚಾಯಿತಿಗಳಿಗೆ ಅ.28ರಂದು ಚುನಾವಣೆ ನಡೆಯಲಿದೆ.

ನಾಮಪತ್ರ ಸಲ್ಲಿಕೆಗೆ ಅ.16 ಕೊನೆಯ ದಿನವಾಗಿದೆ ಮತ್ತು ಈಗಾಗಲೇ ಅ.10ರಿಂದ ನಾಮಪತ್ರ ಸಲ್ಲಿಸಿರುವವರು ಮತ್ತೆ ನಾಮಪತ್ರ ಸಲ್ಲಿಸುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಐ.ಶ್ರೀವಿದ್ಯಾ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಮೂರು ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ಮುಂದುವರಿಸಲು ರಾಜ್ಯ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅದರಂತೆ ಮಂಗಳವಾರ ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ ಮತ್ತು ನಾಮಪತ್ರ ಸಲ್ಲಿಸಲು ಅಂದೇ ಕೊನೆಯ ದಿನವಾಗಿದೆ ಎಂದು ಹೇಳಿದರು.

ನಾಮಪತ್ರಗಳ ಪರಿಶೀಲನೆ ಅ.17ರಂದು ನಡೆಯಲಿದ್ದು, ಅ.20ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದಲ್ಲಿ ಅ.28ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಹಾಗೂ ಮರು ಮತದಾನ ಅಗತ್ಯವಿದ್ದರೆ ಅ.30ರಂದು ಬೆಳಗ್ಗೆ 7ರಿಂದ ಸಂಜೆ 5ರವರೆಗೆ ನಡೆಯಲಿದ್ದು, ಮಸ್ಟರಿಂಗ್, ಡಿಮಸ್ಟರಿಂಗ್ ಮತ ಎಣಿಕೆ ಸೋಮವಾರಪೇಟೆ ಹಾಗೂ ವೀರಾಜಪೇಟೆ ತಾಲೂಕು ಕೇಂದ್ರಗಳ ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ನಡೆಯಲಿದೆ ಎಂದು ವಿವರಿಸಿದರು.

ಸೋಮವಾರಪೇಟೆ ಪಟ್ಟಣ ಪಂಚಾಯಿತಿಯ 11 ಕುಶಾಲನಗರ ಪಟ್ಟಣ ಪಂಚಾಯಿತಿಯ 16 ಹಾಗೂ ವೀರಾಜಪೇಟೆ ಪಟ್ಟಣ ಪಂಚಾಯತಿಯ 18 ವಾರ್ಡ್‍ಗಳಿಗೆ ಚುನಾವಣೆ ನಡೆಯಲಿದ್ದು, ಪ್ರತೀ ವಾರ್ಡ್‍ಗೆ ಒಂದರಂತೆ ಅಂದರೆ ಒಟ್ಟು 45 ಮತಗಟ್ಟೆಗಳನ್ನು ತೆರೆಯಲಾಗುವುದು ಎಂದು ತಿಳಿಸಿದರು.

ಸೂಕ್ಷ್ಮ ಅತಿ ಸೂಕ್ಷ್ಮ ಮತಗಟ್ಟೆಗಳು: ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 11 ಮತಗಟ್ಟೆಗಳ ಪೈಕಿ 3 ಸೂಕ್ಷ್ಮ 2 ಅತಿಸೂಕ್ಷ್ಮ, ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 16 ಮತಗಟ್ಟೆಗಳ ಪೈಕಿ 4 ಸೂಕ್ಷ್ಮ ಹಾಗೂ 3 ಅತಿ ಸೂಕ್ಷ್ಮ ವೀರಾಜಪ್ಭೆಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 18 ಮತಗಟ್ಟೆಗಳ ಪೈಕಿ ಮೂರು ಸೂಕ್ಷ್ಮ ಮತ್ತು 2 ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ ಎಂದು ಶ್ರೀವಿದ್ಯಾ ತಿಳಿಸಿದರು.

ರಾಜ್ಯ ಚುನಾವಣಾ ಆಯೋಗವು ವಿಶೇಷ ವೀಕ್ಷಕರನ್ನಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಯಕ್ತೆ ಅರುಂಧತಿ ಚಂದ್ರಶೇಖರ್, ಸಾಮಾನ್ಯ ವೀಕ್ಷಕರಾಗಿ ಮೈಸೂರಿನ ಅಪರ ಪ್ರಾದೇಶಿಕ ಆಯಕ್ತೆ ರೂಪ.ಎಂ.ಜೆ., ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯ ಮುಖ್ಯ ಲೆಕ್ಕಾಧಿಕಾರಿ ಎನ್. ಸುಶೀಲಮ್ಮ ಅವರನ್ನು ವೆಚ್ಚ ವೀಕ್ಷಕರನ್ನಾಗಿ ನೇಮಕ ಮಾಡಿದೆ ಎಂದು ಹೇಳಿದರು.

 

See also  ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು