News Kannada
Saturday, October 01 2022

ಕರ್ನಾಟಕ

ಕಾವೇರಿ ತೀರ್ಥೋದ್ಭವ: ತುಲಾ ಸಂಕ್ರಮಣ ಜಾತ್ರೆಗೆ ಸಿದ್ಧತೆ ಪೂರ್ಣ - 1 min read

Photo Credit :

ಕಾವೇರಿ ತೀರ್ಥೋದ್ಭವ: ತುಲಾ ಸಂಕ್ರಮಣ ಜಾತ್ರೆಗೆ ಸಿದ್ಧತೆ ಪೂರ್ಣ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಅಕ್ಟೋಬರ್ 17ರ ಸಂಜೆ 6.43 ಗಂಟೆಗೆ ಸಂಭವಿಸುವ ತೀರ್ಥೋದ್ಭವ ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಕಾತರರಾಗಿದ್ದಾರೆ.

ತಲಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಸಾವಿರಾರು ಭಕ್ತರು ಆಗಮಿಸುವ ಹಿನ್ನೆಲೆ ಅಗತ್ಯ ಬಸ್ಸು ಸೌಲಭ್ಯ, ಬ್ಯಾರಿಕೇಡ್ ನಿರ್ಮಾಣ, ವಾಹನ ನಿಲುಗಡೆ ವ್ಯವಸ್ಥೆ ಮತ್ತಿತರ ಸಕಲ ಸಿದ್ಧತೆಗಳು ನಡೆದಿವೆ.

ಮಡಿಕೇರಿ-ಭಾಗಮಂಡಲ-ತಲಕಾವೇರಿಗೆ ಹೋಗಿ ಬರಲು ಅಗತ್ಯ ಬಸ್ ಸೌಲಭ್ಯ, ತಲಕಾವೇರಿಯಲ್ಲಿ ತೀರ್ಥ ಪಡೆದುಕೊಳ್ಳುವಂತಾಗಲು ಏಕಮುಖವಾಗಿ ಭಕ್ತಾದಿಗಳು ಹೋಗಲು ಅಗತ್ಯ ಬ್ಯಾರಿಕೇಡ್‍ಗಳ ನಿರ್ಮಾಣ, ತಾತ್ಕಾಲಿಕ ಶೌಚಾಲಯ ಹಾಗೂ ಕುಡಿಯುವ ನೀರು ವ್ಯವಸ್ಥೆ ಮತ್ತಿತರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ತಲಕಾವೇರಿ ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಊಟೋಪಚಾರ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ.

ತಲಕಾವೇರಿ ದೇವಾಲಯದ ಸುತ್ತ ಹೆಚ್ಚಿನ ಬೆಳಕಿಗಾಗಿ ಪೋಕಸ್ ಲೈಟ್ ವ್ಯವಸ್ಥೆ ಹಾಗೂ ಧ್ವನಿವರ್ಧಕಗಳನ್ನು ಅಳವಡಿಸಲಾಗುವುದು. ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಿಸಿಟಿವಿ ಅಳವಡಿಸಲಾಗಿದೆ ಎಂದು ತಲಕಾವೇರಿ-ಭಾಗಮಂಡಲ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಿ.ಎಸ್.ತಮ್ಮಯ್ಯ ಅವರು ತಿಳಿಸಿದರು.

ತಲಕಾವೇರಿ ತೀರ್ಥೋದ್ಭವ ಜಾತ್ರೆಗೆ ಭಕ್ತಾಧಿಗಳು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇರುವುದರಿಂದ ಸಾಕಷ್ಟು ಪೊಲೀಸರನ್ನು ನಿಯೋಜಿಸಲಾಗಿದೆ. 600ಕ್ಕೂ ಹೆಚ್ಚು ಪೊಲೀಸರು, 150 ಮಂದಿ ಎನ್.ಸಿ.ಸಿ. ಕೆಡೆಟ್‍ಗಳು, ಮೂವರು ಡಿವೈಎಸ್‍ಪಿ, 10 ಇನ್ಸೆಪೆಕ್ಟರ್‍ ಗಳು, 22 ಮಂದಿ ಸಬ್ ಇನ್ಸ್ ಪೆಕ್ಟರ್ ಮತ್ತು ಸಹಾಯಕ ಸಬ್ ಇನ್ಸ್ ಪೆಕ್ಟರ್ ಹಾಗೂ 8 ಪೊಲೀಸ್ ತುಕಡಿ ನಿಯೋಜಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರು ಮಾಹಿತಿ ನೀಡಿದರು.

ತಲಕಾವೇರಿಯಲ್ಲಿ ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಅಲ್ಲಲ್ಲಿ ಸೂಚನಾ ಫಲಕವನ್ನು ಅಳವಡಿಸಲಾಗಿದೆ. 20 ಕಡೆ ಸಿಸಿಟಿವಿ ಅಳವಡಿಸಲಾಗುತ್ತದೆ. ಮಾರ್ಗ ಮಧ್ಯದಲ್ಲಿ ವೀಡಿಯೋ ಅಳವಡಿಸಲಾಗುತ್ತದೆ ಎಂದರು.

ತುಲಾ ಸಂಕ್ರಮಣ ಜಾತ್ರೆ ಹಿನ್ನೆಲೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ಭಾಗಮಂಡಲದ ತ್ರಿವೇಣಿ ಸಂಗಮ ಹಾಗೂ ತಲಕಾವೇರಿಗೆ ಸೋಮವಾರ ಭೇಟಿ ನೀಡಿ ಸಿದ್ಧತೆ ಸಂಬಂಧ ಪರಿಶೀಲನೆ ಮಾಡಿದರು.

ಈ ಸಂದರ್ಭ ಡಿ.ವೈ.ಎಸ್..ಪಿ ಸುಂದರ ರಾಜ್ ತಲಕಾವೇರಿ-ಭಾಗಮಂಡಲ ದೇವಾಲಯ ಕಾರ್ಯ ನಿರ್ವಹಣಾಧಿಕಾರಿ ಜಗದೀಶ್ ಕುಮಾರ್ ಇತರರು ಹಾಜರಿದ್ದರು.

See also  ಕೆಸರು ನೀರು ಕುಡಿದು ಮೃತಪಟ್ಟ ಹೆಣ್ಣಾನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು