News Kannada
Friday, September 30 2022

ಕರ್ನಾಟಕ

ಕಾಸರಗೋಡಿನಲ್ಲಿ ಹರತಾಳ ಸಂಪೂರ್ಣ ಯಶಸ್ವಿ - 1 min read

Photo Credit :

ಕಾಸರಗೋಡಿನಲ್ಲಿ ಹರತಾಳ ಸಂಪೂರ್ಣ ಯಶಸ್ವಿ

ಕಾಸರಗೋಡು: ಶಬರಿಮಲೆ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸುಪ್ರೀಂಕೋರ್ಟ್‌ನ ಆದೇಶವನ್ನು ಅನುಷ್ಠಾನಗೊಳಿಸಲು ಕೇರಳ ಸರಕಾರ ಮುಂದಾಗಿರುವುದನ್ನು ಪ್ರತಿಭಟಿಸಿ ಕರೆ ನೀಡಲಾಗಿರುವ ಕೇರಳ ಹರತಾಳ ಕಾಸರಗೋಡು ಜಿಲ್ಲೆಯಲ್ಲಿ ಸಂಪೂರ್ಣ ಯಶಸ್ವಿಯಾಗಿದೆ.

ಬಸ್ಸು ಸಂಚಾರ ಪೂರ್ಣವಾಗಿ ಸ್ಥಗಿತಗೊಂಡಿದೆ. ಕೆಲವೇ ಕೆಲ ಖಾಸಗಿ ವಾಹನಗಳು ರಸ್ತೆಗಿಳಿದಿವೆ. ಅಂಗಡಿ ಮುಂಗಟ್ಟುಗಳು ಮುಚ್ಚಿವೆ.

ಶಬರಿಮಲೆ ಸಂರಕ್ಷಣಾ ಸಮಿತಿ ಮತ್ತು ಅಂತಾರಾಷ್ಟ್ರೀಯ ಹಿಂದೂ ಪರಿಷತ್ ಗುರುವಾರ ಕೇರಳದಲ್ಲಿ 24 ಗಂಟೆಗಳ ಹರತಾಳಕ್ಕೆ ಕರೆ ನೀಡಿದ್ದು, ಬಿಜೆಪಿ ಬೆಂಬಲ ನೀಡಿದೆ.

ಮಂಜೇಶ್ವರದಲ್ಲಿ ನಿನ್ನೆ ರಾತ್ರಿ ಕೆಎಸ್ ಆರ್ ಟಿ ಸಿ ಬಸ್ಸಿಗೆ ಕಲ್ಲೆಸೆದ ಘಟನೆ ನಡೆದಿದೆ. ಪ್ರಯಾಣಿಕರು, ಸಿಬಂದಿಗಳು ಅಪಾಯದಿಂದ ಪಾರಾಗಿದ್ದಾರೆ.

ತೃಕ್ಕನ್ನಾಡ್ ನಲ್ಲಿ ಹರತಾಳ ಬೆಂಬಲಿಗರು ವಾಹನ ತಡೆದ ಘಟನೆ ಇಂದು ಬೆಳಗ್ಗೆ ನಡೆದಿದೆ. ಜಿಲ್ಲೆಯ ಹಲವೆಡೆ ಸಂಚಾರಕ್ಕೆ ತಡೆಯೊಡ್ಡಿದ ಘಟನೆ ನಡೆದಿದೆ.

ರಸ್ತೆಯಲ್ಲಿ ಕಲ್ಲುಗಳನ್ನಿಟ್ಟು ರಸ್ತೆ ಸಂಚಾರ ಬಂದ್ ಮಾಡಿದ ಘಟನೆಯು ಹಲವೆಡೆ ನಡೆದಿದೆ.

See also  ಇನ್ನು ಕೊಡಗಿನ ಅಭಿವೃದ್ಧಿ ಸುಲಭ : ಶಾಸಕ ಅಪ್ಪಚ್ಚುರಂಜನ್ ವಿಶ್ವಾಸ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು