News Kannada
Friday, December 02 2022

ಕರ್ನಾಟಕ

ಕೆ.ಆರ್.ಪೇಟೆ ಬಳಿ ಹಾವು ಕಚ್ಚಿ ರೈತ ಮಹಿಳೆ ಸಾವು

Photo Credit :

ಕೆ.ಆರ್.ಪೇಟೆ ಬಳಿ ಹಾವು ಕಚ್ಚಿ ರೈತ ಮಹಿಳೆ ಸಾವು

ಕೆ.ಆರ್.ಪೇಟೆ: ಜಮೀನಿನ ಬಳಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತ ಮಹಿಳೆಗೆ ವಿಷಪೂರಿತ ಹಾವು ಕಚ್ಚಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ನಂದಿಪುರ ಗ್ರಾಮದಲ್ಲಿ ನಡೆದಿದೆ.

ನಂದಿಪುರ ಗ್ರಾಮದ ನಂಜೇಗೌಡ ಅವರ ಪತ್ನಿ ಜಯಮ್ಮ(55) ಮೃತಪಟ್ಟ ದುರ್ದೈವಿ.

ಜಯಮ್ಮ ಅವರು ನಂದಿಪುರ ಗ್ರಾಮದಲ್ಲಿರುವ ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆ ತೊಡಗಿದ್ದರು ಎನ್ನಲಾಗಿದೆ. ಈ ವೇಳೆ ಬೆಳೆಯ ನಡುವೆಯಿದ್ದ ವಿಷಪೂರಿತ ಹಾವು ಅವರನ್ನು ಕಚ್ಚಿದ್ದು ಪರಿಣಾಮ ಅಸ್ವಸ್ಥಗೊಂಡಿದ್ದರು.

ಕೂಡಲೇ ಅವರನ್ನು ಪಟ್ಟಣದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹಾದನೂರು ಬಳಿ ಇರುವ ಕ್ರೈಸ್ತಾಲಯ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಟಿಪ್ಪು ಜಯಂತಿ: ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು