ಹುಬ್ಬಳ್ಳಿ: ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿರುವ ಘಟನೆಯು ಶುಕ್ರವಾರ ತಡರಾತ್ರಿ ಇಲ್ಲಿ ನಡೆದಿದೆ.
ತಾಲೂಕಿನ ಛಬ್ಬಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಸವರಾಜ ಕಡಪಟ್ಟಿ(32) ಎಂಬವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ್ದಾರೆ ಎಂದು ವರದಿಗಳು ಹೇಳಿವೆ.
ಶುಕ್ರವಾರ ಮಧ್ಯರಾತ್ರಿ ಅವರು ತನ್ನ ಸ್ನೇಹಿತರೊಂದಿಗೆ ಅಗಡಿ ಬಸವದೇವರ ಗುಡಿ ತಿರುವಿನ ಬಳಿ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ನೇಹಿತರು ದುಷ್ಕರ್ಮಿಗಳನ್ನು ನೋಡಿ ಪರಾರಿಯಾಗಿದ್ದಾರೆ. ವೈಷಮ್ಯದಿಂದ ಕೊಲೆ ನಡೆದಿರುವುದಾಗಿ ಹುಬ್ಬಳ್ಳಿ ಠಾಣೆ ಪೊಲೀಸರು ಹೇಳಿದ್ದಾರೆ.