News Kannada
Friday, December 02 2022

ಕರ್ನಾಟಕ

ಮಂಡ್ಯದಲ್ಲಿ ಅಂಬರೀಶ್ ಪಾರ್ಥಿವ ಶರೀರ ದರ್ಶನಕ್ಕೆ ಸಿದ್ಧತೆ

Photo Credit :

ಮಂಡ್ಯದಲ್ಲಿ ಅಂಬರೀಶ್ ಪಾರ್ಥಿವ ಶರೀರ ದರ್ಶನಕ್ಕೆ ಸಿದ್ಧತೆ

ಮಂಡ್ಯ: ವಿಶ್ವೇಶ್ವರಯ್ಯ ಸ್ಟೇಡಿಯಂನಲ್ಲಿ ಸಾರ್ವಜನಿಕರಿಗೆ ಅಂಬರೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದ್ದು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. 

ಕರುನಾಡ ಕರ್ಣ, ಮಂಡ್ಯದ ಗಂಡು ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತರಲೇ ಬೇಕೆಂಬ ಅಭಿಮಾನಿಗಳ ಒತ್ತಾಯಕ್ಕೆ ಸರ್ಕಾರ ಮಣಿದಿದ್ದು ಸೇನಾ ಹೆಲಿಕಾಪ್ಟರ್‍ಗಳ ಮೂಲಕ ಮಂಡ್ಯಕ್ಕೆ ಪಾರ್ಥಿವ ಶರೀರವನ್ನು ಸಂಜೆ ವೇಳೆಗೆ ಬರಲಿದೆ. 

ಈ ವಿಚಾರವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದು, ರಕ್ಷಣಾ ಸಚಿವೆ ನಿರ್ಮಲ ಸೀತಾರಾಮ್ ಅವರನ್ನು ಸಂಪರ್ಕಿಸಿ ಸೇನಾ ಹೆಲಿಕಾಪ್ಟರ್‍ನ್ನು ಪಡೆಯುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಹೀಗಾಗಿ ಪಾರ್ಥಿವ ಶರೀರವನ್ನು ನೇರವಾಗಿ ಮಂಡ್ಯದ ವಿಶ್ವೇಶ್ವರಯ್ಯ ಸ್ಟೇಡಿಯಂಗೆ ತರಲಾಗುತ್ತಿದ್ದು ಅಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. 

ಇತ್ತ ಪಾರ್ಥಿವ ಶರೀರ ಮಂಡ್ಯ ನಗರದ ಸ್ಟೇಡಿಯಂಗೆ ತರಲಾಗುತ್ತಿರುವ ಹಿನ್ನಲೆಯಲ್ಲಿ ಸೂಕ್ತ ಭದ್ರತೆ ಮತ್ತು ಸಾರ್ವಜನಿಕರ ದರ್ಶನಕ್ಕೆ ಬೇಕಾದ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡುತ್ತಿದೆ. 

ಈಗಾಗಲೇ ಸ್ಟೇಡಿಯಂನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಶಿವಪ್ರಕಾಶ್ ಅವರ ನೇತೃತ್ವದಲ್ಲಿ ಭದ್ರತೆ ಮತ್ತು ಸಿದ್ಧತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. 

ಈಗಾಗಲೇ ನಗರದಲ್ಲಿ ಯಾವುದೇ ಅಹಿತಕರ ಘಟನೆಗೆ ಅವಕಾಶವಾಗದಂತೆ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗುತ್ತಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

See also  ಸಂತ್ರಸ್ತರ ಮನೋಬಲ ವೃದ್ಧಿಗೆ ಪರಿಹಾರ ಕೇಂದ್ರಗಳಲ್ಲಿ ಯೋಗಾಭ್ಯಾಸ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು