ಮಂಡ್ಯ: ರೆಬೆಲ್ ಸ್ಟಾರ್ ಅಂಬರೀಷ್ ಅವರ ಸಾವಿನ ಸುದ್ದಿ ತಿಳಿದು ಅವರ ಅಪ್ಪಟ ಅಭಿಮಾನಿ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಹೊಟ್ಟೆ ಗೌಡನದೊಡ್ಡಿಯ ತಮ್ಮಯ್ಯ ದುಃಖ ತಾಳಲಾರದೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸಂಜೆ 4ಕ್ಕೆ ಅಂಬರೀಷ್ ಅವರ ಪಾರ್ಥಿವ ಶರೀರ ಮಂಡ್ಯಕ್ಕೆ ಬರಲಿದೆ. ಅರ್.ಎಂ. ವಿ. ಕ್ರೀಡಾಂಗಣದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ಅನುಕೂಲವಾಗುವಂತೆ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ.
ತೂಬಿನಕೆರೆ ವಿ.ಸಿ.ಫಾರಂನಲ್ಲಿ ಗಣ್ಯರ ಹೆಲಿಕಾಫ್ಟರ್ ಲ್ಯಾಂಡಿಂಗ್ ಗೆ ವ್ಯವಸ್ಥೆ ಮಾಡಲಾಗಿದೆ. ಸುಮಾರು 4 ರಿಂದ 5 ಲಕ್ಷ ಜನ ಸೇರುವ ನಿರೀಕ್ಷೆ ಇದ್ದು ಬಿಗಿ ಬಂದೋಬಸ್ತ್ ನ್ನು ಕೈಗೊಳ್ಳಲಾಗಿಒದೆ.