ಹೊನ್ನಾಳಿ: ಪ್ರತಿಭಟನೆ ವೇಳೆ ಸಾರ್ವಜನಿಕ ತೊಂದರೆ ಉಂಟು ಮಾಡಿದ ಆರೋಪದ ಮೇರೆಗೆ ಪೊಲೀಸರು ಶಾಸಕ ಎಂ.ಪಿ.ರೇಣುಕಾಚಾರ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.3ರಂದು ಸೋಮವಾರ ಹೊನ್ನಾಳಿ ಬಂದ್ ನಡೆಸಿ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನೆಯಲ್ಲಿ ನೂರಾರು ಮಂದಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರು.
ಪ್ರತಿಭಟನೆ ವೇಳೆ ರಸ್ತೆ ತಡೆದು ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇರೆಗೆ ರೇಣುಕಾಚಾರ್ಯ ಸೇರಿ 10 ಮಂದಿಯನ್ನು ಬಂಧಿಸಲಾಗಿದೆ.